×
Ad

Kalaburagi | ಜು.10ರಂದು ಸಾಧಕರೊಂದಿಗೆ ಸಂವಾದ ಕಾರ್ಯಕ್ರಮ

Update: 2026-07-09 19:01 IST

ಕಲಬುರಗಿ: ಕಲಬುರಗಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಜುಲೈ 10ರಂದು ಸಂಜೆ 4 ಗಂಟೆಗೆ ‘ಸಾಧಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ನಗರದ ಸೇಡಂ–ಶಹಾಬಾದ್ ವರ್ತುಲ ರಸ್ತೆಯಲ್ಲಿರುವ ಡಾ. ಸಿದ್ದಯ್ಯ ಪುರಾಣಿಕ ಸುವರ್ಣ ಸಾಂಸ್ಕೃತಿಕ ಸಮುಚ್ಚಯದ ರಂಗಾಯಣ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದೆ.

ಕಾರ್ಯಕ್ರಮದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ ಹಿರಿಯ ಕಲಾವಿದ ಹನೀಫಾ ಎಂ. ಶೇಖ್ ಅವರು ಭಾಗವಹಿಸಿ ತಮ್ಮ ಕಲಾ ಜೀವನದ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.

ಈ ಸಂದರ್ಭದಲ್ಲಿ ಕಲಬುರಗಿ ರಂಗಾಯಣದ ಆಡಳಿತಾಧಿಕಾರಿ ಸಿದ್ರಾಮ್ ಸಿಂಧೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕಿ ಜಗದೀಶ್ವರಿ ನಾಸಿ ಹಾಗೂ ಕಲಬುರಗಿ ವಿಭಾಗದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಬಸವರಾಜ ಹೂಗಾರ ಉಪಸ್ಥಿತರಿರುವರು ಎಂದು ಇಲಾಖೆಯ ಪ್ರಕಟಣೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News