×
Ad

ಕಲಬುರಗಿ | ಕೇಂದ್ರ ಕಾರಾಗೃಹದಲ್ಲಿ ಅಂತರರಾಷ್ಟ್ರೀಯ ಮಾದಕ ವಸ್ತುಗಳ ವಿರೋಧಿ ದಿನಾಚರಣೆ

Update: 2025-06-26 22:06 IST

ಕಲಬುರಗಿ; ಕೇಂದ್ರ ಕಾರಾಗೃಹದಲ್ಲಿರುವ ಬಂಧಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ವತಿಯಿಂದ ಅಂತರರಾಷ್ಟ್ರೀಯ ಮಾದಕ ವಸ್ತುಗಳ ಸೇವೆನೆ ಕಳ್ಳಸಾಗಣಿಕೆ ವಿರೋಧಿ ಅರಿವಿನ ಕಾರ್ಯಕ್ರಮ ಜರುಗಿತು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮನೋವೈದ್ಯರು ಡಾ. ಇರ್ಫಾನ್ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿ, ಸಸಿಗೆ ನೀರು ನೀಡುವುದರ ಮೂಲಕ ಚಾಲನೆ ನೀಡಿದ ಅವರು, ಮಾದಕ ವಸ್ತುಗಳ ಸೇವೆನೆಯು ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೆಸನಿಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ. ಮಕ್ಕಳು, ಹದಿ ಹರೆಯದವರು, ಯುವ ಜನರು ಮಾದಕ ವ್ಯಸನಕ್ಕೆ ತುತ್ತಾಗಿ ತಮ್ಮ ಜೀವನವನ್ನೇ ಹಾಳು ಮಾಡಿಕೊಳ್ಳುತ್ತಿದ್ದಾರೆ. ಕಾರಣ ದೈಹಿಕ ಮತ್ತು ಮಾನಸಿಕ ಒತ್ತಡಕ್ಕೆ ಒಳಗಾಗಿ, ಸ್ನೇಹಿತರ ಒತ್ತಾಯದಿಂದಾಗಿ ಅಥವಾ ಮನೆಯ ವಾತಾವರಣ ಸರಿ ಇಲ್ಲದಿರುವುದರಿಂದ, ಇತರೇ ಸಮಸ್ಯೆ ಮತ್ತು ನೋವು ಮರೆಯಲು ಮಾದಕ ವಸ್ತುಗಳ ಸೇವನೆಗೆ ತುತ್ತಾಗುತ್ತಿದ್ದಾರೆ ಎಂದರು.

ಡಾ.ರವೀಂದ್ರ ಬನ್ನೇರಿ ಮಾತನಾಡಿ, ಕಾರಾಗೃಹದಲ್ಲಿರುವ ಬಂಧಿಗಳು, ಆಸ್ಪತ್ರೆಗೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ತಿಳಿಸಿ ಅದಕ್ಕೆ ಸೂಕ್ತವಾದ ಚಿಕಿತ್ಸೆಯನ್ನು ಪಡೆದುಕೊಳ್ಳುವಂತೆ ತಿಳಿ ಹೇಳಿದರು. 

ಸಂಸ್ಥೆಯ ಸಹಾಯಕ ಅಧೀಕ್ಷಕರಾದ ಚನ್ನಪ್ಪ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಸಂಸ್ಥೆಯ ವೈದ್ಯಾಧಿಕಾರಿ ಡಾ.ಆನಂದ ಅಡಕಿ, ಜೈಲರ್ ಶ್ರೀಮಂತ ಪಾಟೀಲ್, ಶಾಮ ಬಿದ್ರಿ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿದರು. ಮಹಾದೇವಿ ಸ್ವಾಗತಿಸಿದ್ದರು. ನಾಗರಾಜ ಮೂಲಗೆ ನಿರೂಪಿಸಿದರು. ಭೀಮಾಶಂಕರ್ ಡಾಂಗೆ ಒಂದಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News