ಕಲಬುರಗಿ | ವಿಶ್ವ ಮಹಿಳಾ ದಿನಾಚರಣೆ
ಕಲಬುರಗಿ: ಕರ್ನಾಟಕ ಯುವಶಕ್ತಿ ರೈತರ ಮಕ್ಕಳ ಮಹಾಶಕ್ತಿ ಸಂಘಟನೆಯಿಂದ ನಗರದ ಕನ್ನಡ ಭವನದಲ್ಲಿ ವಿಶ್ವ ಮಹಿಳಾ ದಿನಾಚರಣೆ ಕಾರ್ಯಕ್ರಮ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಸಂಘಟನೆಯ ವತಿಯಿಂದ 2ರಿಂದ 9 ವರ್ಷ ವಯಸ್ಸಿನ 1,000 ಹೆಣ್ಣುಮಕ್ಕಳನ್ನು ದತ್ತು ಪಡೆದು ಅವರ ಹೆಸರಿನಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯಡಿ ಪೋಸ್ಟ್‌ಆಫೀಸ್ ಖಾತೆ ತೆರೆಯಿಸಿ 15 ವರ್ಷಗಳ ಕಾಲ ಪ್ರತಿ ತಿಂಗಳು 250 ರೂ. ಹಣ ಜಮಾ ಮಾಡುವುದಾಗಿ ಘೋಷಣೆ ಮಾಡಲಾಯಿತು.
ಕಾರ್ಯಕ್ರಮವನ್ನು ನಿವೃತ್ತ ಪ್ರಾಂಶುಪಾಲರು, ಸಾಹಿತಿ ಹಾಗೂ ಹೇಮರೆಡ್ಡಿ ಮಲ್ಲಮ್ಮ ಮಹಿಳಾ ಅಭಿವೃದ್ಧಿ ಸಂಸ್ಥೆಯ ರಾಜ್ಯಾಧ್ಯಕ್ಷೆ ಡಾ. ವಿಶಾಲಾಕ್ಷಿ ವಿ. ಕರಡ್ಡಿ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರ ಸಂಘದ ಜಿಲ್ಲಾ ಉಪಾಧ್ಯಕ್ಷ ಪರಮೇಶ್ವರ ದೇಸಾಯಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೌರವ ಕಾರ್ಯದರ್ಶಿ ಧರ್ಮಣ್ಣ ಧನ್ನಿ ಮಾತನಾಡಿದರು.
ಸಂಘಟನೆಯ ರಾಜ್ಯಾಧ್ಯಕ್ಷ ಅವ್ವಣಗೌಡ ಪಾಟೀಲ್ ಮಾತನಾಡಿ, ನಮ್ಮ ಸಂಘಟನೆ ಸದಾ ರೈತರ ಹಾಗೂ ವಿದ್ಯಾರ್ಥಿಗಳ ಮಕ್ಕಳ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತಿದೆ. ಮುಂದೆಯೂ ಜನರ ವಿಶ್ವಾಸಕ್ಕೆ ತಕ್ಕಂತೆ ಸೇವಾ ಕಾರ್ಯಗಳನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.