×
Ad

ಕಲಬುರಗಿ | ಎಲ್‌ಪಿಜಿ ಸಿಲಿಂಡರ್ ಬೆಲೆ ಏರಿಕೆ ಹಿಂಪಡೆಯಲು ಜನವಾದಿ ಮಹಿಳಾ ಸಂಘಟನೆ ಆಗ್ರಹ

Update: 2026-03-09 17:03 IST

ಕಲಬುರಗಿ: ಗೃಹ ಬಳಕೆಯ ಎಲ್‌ಪಿಜಿ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಇತ್ತೀಚೆಗೆ ಹೆಚ್ಚಿಸಿರುವ 60 ರೂ. ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕೆಂದು ಜನವಾದಿ ಮಹಿಳಾ ಸಂಘಟನೆ ಆಗ್ರಹಿಸಿದೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಂಘಟನೆಯ ಜಿಲ್ಲಾಧ್ಯಕ್ಷೆ ಪದ್ಮಿನಿ ಕಿರಣಗಿ ಅವರು, ಸಿಲಿಂಡರ್ ಬೆಲೆ 853 ರೂ. ನಿಂದ 913 ರೂ. ಗೆ ಏರಿಕೆಯಾಗಿ ಸಾಮಾನ್ಯ ಕುಟುಂಬಗಳ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬಿದ್ದಿದೆ ಎಂದು ತಿಳಿಸಿದ್ದಾರೆ. ಹಿಂದೆ ನೀಡಲಾಗುತ್ತಿದ್ದ ಸಬ್ಸಿಡಿಯ ಪರಿಣಾಮವೂ ಈಗ ಬಹುತೇಕ ನಿಷ್ಪ್ರಯೋಜಕವಾಗುತ್ತಿದೆ ಎಂದು ಅವರು ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಯಶಸ್ಸನ್ನು ಹೊಗಳುತ್ತಿರುವ ಸಂದರ್ಭದಲ್ಲೇ ಈ ರೀತಿಯ ಬೆಲೆ ಏರಿಕೆ ಮಾಡಿರುವುದು ಬಡ ಕುಟುಂಬಗಳಿಗೆ ದೊಡ್ಡ ಹೊಡೆತವಾಗಿದೆ ಎಂದು ಹೇಳಿದರು. ಸಬ್ಸಿಡಿ ಇಲ್ಲದ ಎಲ್‌ಪಿಜಿ ಸಿಲಿಂಡರ್ ಬೆಲೆ ಕಳೆದ ಒಂದು ವರ್ಷದಲ್ಲಿ 110 ರೂ. ಹೆಚ್ಚಳ ಕಂಡಿದ್ದು, ಇದೇ ವಾರ ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆಯೂ 114.50 ರೂ. ಹೆಚ್ಚಳವಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರ್ಕಾರವು ಜನರ ಬದುಕಿನ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರದ ವಿರುದ್ಧ ಜನರ ಹೋರಾಟ ಇನ್ನಷ್ಟು ತೀವ್ರಗೊಳ್ಳಲಿದೆ ಎಂದು ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News