×
Ad

ಕಲಬುರಗಿ| ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳಿಂದ ಪ್ರತಿಭಟನೆ

Update: 2025-12-15 19:46 IST

ಕಲಬುರಗಿ: ಕೇಂದ್ರ ಹಾಗೂ ರಾಜ್ಯ ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಲಕ್ಷಾಂತರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಿಕೊಳ್ಳಬೇಕೆಂದು ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.

ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಸಿದ ಪ್ರತಿಭಟನಾಕಾರರು, ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸರಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಬೇಕು. ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗಳ ನೇಮಕಾತಿಯಲ್ಲಿ ಎಸ್‌ಸಿ, ಎಸ್‌ಟಿ ಹಾಗೂ ಓಬಿಸಿಗಳಿಗೆ 33 ವರ್ಷ ಹಾಗೂ ಸಾಮಾನ್ಯ ವರ್ಗಕ್ಕೆ 30 ವರ್ಷಕ್ಕೆ ಹೆಚ್ಚಿಸಿ ಆದೇಶ ಹೊರಡಿಸಬೇಕು. ಒಳಮೀಸಲಾತಿ ಗೊಂದಲವನ್ನು ಕೂಡಲೇ ಪರಿಹರಿಸಿ ಅಧಿಸೂಚನೆ ಹೊರಡಿಸಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಸಂಚಾಲಕ ರಮೇಶ್ ದೇವಕರ್‌, ಸಚಿನ್ ಪವಾರ್, ಕೂಬಾ ನಾಯಕ್, ಪ್ರಶಾಂತ್ ಹಾದಿಮನಿ, ಪ್ರಭಾಕರ್‌ ಚಿಂಚೋಳಿ, ಸವಿತಾ, ಅಶ್ವಿನಿ, ಜಗನ್ನಾಥ್ ಎಸ್.ಎಚ್., ವಿ.ಜಿ.ದೇಸಾಯಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News