Kalaburagi | ಎನ್‌ಕೆ ಆಸ್ಪತ್ರೆಯಲ್ಲಿ ಸಂಭ್ರಮದ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ
ಕಲಬುರಗಿ: ನಗರದ ಎನ್‌ಕೆ ಆಸ್ಪತ್ರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವವನ್ನು ಸಂಭ್ರಮ, ದೇಶಭಕ್ತಿ ಹಾಗೂ ಉತ್ಸಾಹದಿಂದ ಆಚರಿಸಲಾಯಿತು.
ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಕಲಬುರಗಿ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಂಪ್ರಭು ಪಾಟೀಲ್ ಭಾಗವಹಿಸಿ ರಾಷ್ಟ್ರಧ್ವಜಾರೋಹಣ ನೆರವೇರಿಸಿದರು.
ಬಳಿಕ ಮಾತನಾಡಿದ ಶಾಸಕ ಅಲ್ಲಂಪ್ರಭು ಪಾಟೀಲ್, “ದೇಶದ ಸ್ವಾತಂತ್ರ್ಯಕ್ಕಾಗಿ ಮಹಾನ್ ಹೋರಾಟಗಾರರು ಮಾಡಿದ ತ್ಯಾಗ ಮತ್ತು ಬಲಿದಾನದ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಸವಿಯನ್ನು ಅನುಭವಿಸುತ್ತಿದ್ದೇವೆ. ಅವರ ಕೊಡುಗೆಯನ್ನು ಎಂದಿಗೂ ಮರೆಯಬಾರದು” ಎಂದು ಹೇಳಿದರು.
ಎನ್‌ಕೆ ಆಸ್ಪತ್ರೆಯ ಅಧ್ಯಕ್ಷ ಡಾ. ಆರಿಫ್ ರಝಾ ಅಹ್ಮದ್ ಅವರು 80ನೇ ಸ್ವಾತಂತ್ರ್ಯೋತ್ಸವದ ಶುಭಾಶಯಗಳನ್ನು ತಿಳಿಸಿ, ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ದೂರದೃಷ್ಟಿ ಹಾಗೂ ಕೊಡುಗೆಗಳಿಂದ ದೇಶ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದರು.
ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳ ಫಲವಾಗಿ ಏಮ್ಸ್ ಸೇರಿದಂತೆ ಹಲವು ಮಹತ್ವದ ರಾಷ್ಟ್ರೀಯ ಸಂಸ್ಥೆಗಳು ನಿರ್ಮಾಣಗೊಂಡಿದ್ದು, ಅವು ದೇಶದ ಅಭಿವೃದ್ಧಿಗೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದು ಅವರು ಹೇಳಿದರು.
ಕಾರ್ಯಕ್ರಮದಲ್ಲಿ ಡಾ. ಹೈದರ್ ರೆಹಮಾನ್, ಡಾ. ಮೊಹ್ತಶಿಂ, ಡಾ. ನವೀನ್, ಇಂಜಿನಿಯರ್ ಅಬ್ದುಲ್ ಮೊಹೀದ್, ಆಸ್ಪತ್ರೆ ಆಡಳಿತಾಧಿಕಾರಿ ಸುರೇಶ್, ಮಾರ್ಕೆಟಿಂಗ್ ಹೆಡ್ ಮುಬೀನ್ ಅಹ್ಮದ್, ಸೇರಿದಂತೆ ಆಸ್ಪತ್ರೆಯ ಎಲ್ಲಾ ವಿಭಾಗಗಳ ಮುಖ್ಯಸ್ಥರು, ನರ್ಸಿಂಗ್ ಸಿಬ್ಬಂದಿ ಹಾಗೂ ಇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.