Kalabuaragi | ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾದ ಕಲ್ಯಾಣ ಕರ್ನಾಟಕ ಹೋರಾಟಗಾರರು ಪೊಲೀಸ್ ವಶಕ್ಕೆ
ಕಲಬುರಗಿ: ಕನ್ನಡ ರಾಜ್ಯೋತ್ಸವದಂದೇ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯದ ಕೂಗು ಮೊಳಗಿದ್ದು, ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾದ 15ಕ್ಕೂ ಅಧಿಕ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಗೆ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಹಾಗೂ ಸಂವಿಧಾನದ 371(ಜೆ) ಕಲಂ ಸಮರ್ಪಕವಾಗಿ ಜಾರಿಗೊಳಿಸುವಂತೆ ಆಗ್ರಹಿಸಿ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿಯ ಕಾರ್ಯಕರ್ತರು ಪ್ರತ್ಯೇಕ ಧ್ವಜಾರೋಹಣಕ್ಕೆ ಮುಂದಾಗಿದ್ದರು.
ನಗರದ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಧ್ವಜಾರೋಹಣಕ್ಕೆ ತೆರಳುತ್ತಿದ್ದ ಹೋರಾಟಗಾರರನ್ನು ಕೋರ್ಟ್ ಸರ್ಕಲ್ನಲ್ಲಿ ಪೊಲೀಸರು ವಶಕ್ಕೆ ಪಡೆದರು.
ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ಅಧ್ಯಕ್ಷ ಎಂ.ಎಸ್. ಪಾಟೀಲ್ ಸೇರಿದಂತೆ 15ಕ್ಕೂ ಅಧಿಕ ಹೋರಾಟಗಾರರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ಪಡೆಯಲಾಗಿದೆ.
ಪ್ರತಿಭಟನೆಯ ಹಿನ್ನೆಲೆಯಲ್ಲಿ ನಗರದ ಪ್ರಮುಖ ವೃತ್ತಗಳಲ್ಲಿ ಬಿಗಿ ಪೊಲೀಸ್ ಭದ್ರತೆ ಏರ್ಪಡಿಸಲಾಗಿತ್ತು.