ಕಲಬುರಗಿ | ಗುಲ್ಬರ್ಗಾ ವಿವಿಯ ಸಮಗ್ರ ಅಭಿವೃದ್ಧಿಗೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹ
ಕಲಬುರಗಿ: ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾಗಿ ಶ್ರೀಮಂತ ಇತಿಹಾಸ ಹೊಂದಿರುವ ಗುಲ್ಬರ್ಗಾ ವಿಶ್ವವಿದ್ಯಾಲಯಕ್ಕೆ ಹಿಂದಿನಂತೆ ಘನತೆ ಹೆಚ್ಚಿಸಿ ಸರ್ವಾಂಗೀಣ ಅಭಿವೃದ್ಧಿಗೆ ಬದ್ದತೆ ಪ್ರದರ್ಶಿಸುವಂತೆ ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ ಆಗ್ರಹಿಸಿದೆ.
ವಿವಿಯ ನೂತನ ಕುಲಪತಿಗಳಾಗಿ ನೇಮಕವಾದ ಪ್ರೊ.ಶಶಿಕಾಂತ ಎಸ್. ಉಡಿಕೇರಿ ಅವರನ್ನು ಹೋರಾಟ ಸಮಿತಿಯ ನಿಯೋಗ ಭೇಟಿ ಮಾಡಿ, ವಿವಿಯಲ್ಲಿ ಖಾಲಿ ಇರುವ ಶಿಕ್ಷಕರ ಮತ್ತು ಶಿಕ್ಷಕೇತರ ಹುದ್ದೆಗಳ ಭರ್ತಿ ಮಾಡುವುದು, ಮತ್ತಿತ್ತರ ಶೈಕ್ಷಣಿಕ ಗುಣಮಟ್ಟ ಹೆಚ್ಚಿಸಲು ದಿಟ್ಟತನದ ಧೋರಣೆ ಅನುಸರಿಸಬೇಕೆಂದು ನಿಯೋಗ ಒತ್ತಾಯಿಸಿದೆ.
ಕಲ್ಯಾಣ ಕರ್ನಾಟಕದ ವಿಭಾಗೀಯ ಕೇಂದ್ರ ಕಲಬುರಗಿಯಲ್ಲಿರುವ ಗುಲ್ಬರ್ಗಾ ವಿವಿಯ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತೀರಿ ಎಂದು ಭರವಸೆ ಇಟ್ಟಿರುವುದಾಗಿ ಸಮಿತಿಯ ಮುಖಂಡರು ಹೇಳಿದ್ದಾರೆ.
ಈ ಸಂದರ್ಭದಲ್ಲಿ ವಿವಿಯ ಕುಲಸಚಿವರಾದ ಪ್ರೊ.ರಮೇಶ ಲಂಡನಕರ್, ಸಮಿತಿಯ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲಕ್ಮಣ ದಸ್ತಿ, ಸಮಿತಿಯ ಪ್ರಮುಖರಾದ ಪ್ರೊ.ಆರ್.ಕೆ.ಹುಡಗಿ, ಪ್ರೊ.ಬಸವರಾಜ ಕುಮ್ನುರ್, ಡಾ.ಮಾಜಿದ ದಾಗಿ, ಮನೀಷ್ ಜಾಜು.ರೌಫ ಖಾದ್ರಿ, ರಾಜು ಜೈನ ಸೇರಿದಂತೆ ಅನೇಕರು ಇದ್ದರು.