ಕಲಬುರಗಿ| ಆ.18 ರಂದು ಕಮಲಾಪೂರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟ
ಕಲಬುರಗಿ: ಪ್ರಸಕ್ತ 2025-26ನೇ ಸಾಲಿನ ಕಮಲಾಪೂರ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಆ.18 ರಂದು ಬೆಳಿಗ್ಗೆ 10 ಗಂಟೆಯಿಂದ ಕಲಬುರಗಿ ನಗರದ ಚಂದ್ರಶೇಖರ ಪಾಟೀಲ್ ಜಿಲ್ಲಾ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಕ್ರೀಡಾಪಟುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಪುರುಷ ಮತ್ತು ಮಹಿಳೆಯರಿಗಾಗಿ ಅತ್ಲೆಟಿಕ್ಸ್, ವಾಲಿಬಾಲ್, ಫುಟ್ಬಾ ಬಾಲ್, ಖೋಖೋ, ಕಬಡ್ಡಿ, ಥ್ರೋಬಾಲ್, ಯೋಗಾ ಕ್ರೀಡಾಕೂಟವನ್ನು ಹಾಗೂ ಪುರುಷರಿಗೆ ಮಾತ್ರ ಫುಟ್ಬಾಲ್ ಕ್ರೀಡಾಕೂಟವನ್ನು ಆಯೋಜಿಸಲಾಗುತ್ತಿದೆ. ಈ ಕ್ರೀಡಾಕೂಟದಲ್ಲಿ ಭಾಗವಹಿಸುವ ಕ್ರೀಡಾಪಟುಗಳು ಸ್ವ-ಇಚ್ಚೆಯಿಂದ ಭಾಗವಹಿಸಬೇಕು. ಕರ್ನಾಟಕದ ನಿವಾಸಿಗಳಾಗಿರಬೇಕು. ರಕ್ಷಣಾ ಪಡೆ, ಅರೆ ರಕ್ಷಣಾ ಪಡೆಗೆ ಸೇರಿದ ಕ್ರೀಡಾಪಟುಗಳಾಗಿರಬಾರದು. ಓರ್ವ ಕ್ರೀಡಾಪಟು ಅಥವಾ ತಂಡ ಒಂದು ಬಾರಿ ತಾಲ್ಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಬೇರೆ ತಾಲ್ಲೂಕು/ಜಿಲ್ಲಾ ಕ್ರೀಡಾಕೂಟದಲ್ಲಿ ಭಾಗವಹಿಸುವಂತಿಲ್ಲ.
ಈ ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವ ಕ್ರೀಡಾಪಟುಗಳು 2025ರ ಆ.16ರೊಳಗಾಗಿ ಕಲಬುರಗಿ ಕಲಬುರಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಬಾಸ್ಕೆಟ್‍ಬಾಲ್ ತರಬೇತುದಾರ ಪ್ರವೀಣ ಕುಮಾರ ಪುಣೆ ಇವರ ಮೊಬೈಲ್ ಸಂಖ್ಯೆ 8884774416 ಗೆ ಸಂಪರ್ಕಿಸಲು ಕೋರಲಾಗಿದೆ.