ಕಲಬುರಗಿ: ಕನ್ನಡ ಭಾಷೆಗೆ ಸಾವಿರಾರು ವರ್ಷಗಳ ಇತಿಹಾಸವಿದ್ದು, ದೇಶದ ಶ್ರೀಮಂತ ಭಾಷೆಗಳಲ್ಲಿ ಒಂದಾಗಿದೆ. ಹಿಂದಿ ನಂತರ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿಗಳನ್ನು ಪಡೆದ ಭಾಷೆ ಕನ್ನಡ ಎಂಬುದು ಹೆಮ್ಮೆಯ ಸಂಗತಿ. ಇತರ ಭಾಷೆಗಳನ್ನು ಗೌರವಿಸುತ್ತಲೇ ನಮ್ಮ ಕನ್ನಡ ಭಾಷೆಯನ್ನು ಮತ್ತಷ್ಟು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ಡಯಟ್ ಪ್ರಾಂಶುಪಾಲರು ಹಾಗೂ ಉಪನಿರ್ದೇಶಕ (ಅಭಿವೃದ್ಧಿ) ಶ್ರೀಶೈಲ ಬಿರಾದರ ಹೇಳಿದರು.

ನಗರದ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್)ಯಲ್ಲಿ ರವಿವಾರ ಆಯೋಜಿಸಿದ್ದ 71ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅನೇಕ ಸಾಹಿತಿಗಳು ತಮ್ಮ ಅಮೂಲ್ಯ ಕೊಡುಗೆಗಳ ಮೂಲಕ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕನ್ನಡ ಭಾಷೆಯ ಉಳಿವು ಮತ್ತು ಬೆಳವಣಿಗೆಗೆ ಎಲ್ಲರೂ ಕೈಜೋಡಿಸಬೇಕು. ವಿಶೇಷವಾಗಿ ಆಡಳಿತ ಭಾಷೆಯಾಗಿ ಕನ್ನಡವನ್ನು ಪ್ರತಿಯೊಬ್ಬರೂ ಕಡ್ಡಾಯವಾಗಿ ಬಳಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ದಕ್ಷಿಣ ಕ್ಷೇತ್ರ ಶಿಕ್ಷಣಾಧಿಕಾರಿ ವಿಜಯಕುಮಾರ ಜಮಖಂಡಿ, ಹಿರಿಯ ಉಪನ್ಯಾಸಕರಾದ ಚಂದ್ರಶೇಖರಗೌಡ ಪಾಟೀಲ, ಕಮಲಾ ಕುಲಕರ್ಣಿ, ಹಣಮಂತ ರಾಥೋಡ್, ಸುಧಾರಾಣಿ, ಅಂಬರೀಶ್ ಕಾಂಬಳೆ, ಸಂಸ್ಥೆಯ ಎಲ್ಲ ಉಪನ್ಯಾಸಕರು, ಇಎಲ್‌ಟಿಸಿ ವಿಭಾಗದ ಬೋಧಕರು, ಬೋಧಕೇತರ ಸಿಬ್ಬಂದಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಸಿಬ್ಬಂದಿ ಹಾಗೂ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor