ಕಲಬುರಗಿ | ಸವಳು ಮಾಫಿಯಾ ತಡೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆ
Update: 2025-05-16 22:10 IST
ಕಲಬುರಗಿ : ಜಿಲ್ಲೆಯ ಕಾಳಗಿ ತಾಲ್ಲೂಕಿನ ಕೊರವಿ ಮತ್ತು ಸುಗೂರ ಹಾಗೂ ಚಿಂಚೋಳಿ ತಾಲ್ಲೂಕಿನ ಸುಲೆಪೇಟ್ ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಸವಳು ಮಾಫಿಯಾದಂಧೆ ನಡೆಸುತ್ತಿರುವುದನ್ನು ತಡೆಯುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಕಚೇರಿ ಮುಂದೆ ಶುಕ್ರವಾರ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ಸುಲೆಪೇಟ್ ವ್ಯಾಪ್ತಿಯಲ್ಲಿ ಸವಳು ಸಂಗ್ರಹ ಮಾಡಿರುವುದನ್ನು ತಕ್ಷಣವೇ ಜಪ್ತಿ ಮಾಡಬೇಕು ಮತ್ತು ಸವಳು ಮಾಫಿಯಾ ದಂಧೆ ನಡೆಸುತ್ತಿವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಸಿದರು.
ಸಂಘದ ಜಿಲ್ಲಾ ಅಧ್ಯಕ್ಷಶರಣಬಸಪ್ಪ ಮಮಶೆಟ್ಟಿ, ಉಪಾಧ್ಯಕ್ಷದೇವಿಂದ್ರಪ್ಪ ಪಾಟೀಲ, ದಿಲೀಪ ನಾಗೂರೆ, ನಾಗಯ್ಯ ಸ್ವಾಮಿ, ಪ್ರಭು ಪೂರಾ ಬದ್ದಿ ಸೇರಿದಂತೆ ಮತ್ತಿತರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.