×
Ad

ಕಲಬುರಗಿ | ಯುವಕನ ಹತ್ಯೆ ; ಆರೋಪಿಯ ಬಂಧನ

Update: 2025-03-05 23:23 IST

ಆರೋಪಿ ಶಿವಾನಂದ್

ಕಲಬುರಗಿ : ಮಂಗಳವಾರ ಬೆಳಗ್ಗೆ ಕಾಕಡೆ ಚೌಕ್ ಸಮೀಪದ ಪ್ರದೇಶದಲ್ಲಿ ಯುವಕನೋರ್ವನನ್ನು ಭೀಕರವಾಗಿ ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಘಟನೆಯಾದ 24 ಗಂಟೆಗಳಲ್ಲಿ ಬಂಧಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ.

ಭವಾನಿ ನಗರದ ಶಿವಾನಂದ್ ಅಲಿಯಾಸ್ ಶಿವು ಬಂಧಿತ ಆರೋಪಿ ಎಂದು ತಿಳಿದುಬಂದಿದೆ.

ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಂಗಳವಾರ ಕಾಕಡೆ ಚೌಕ್ ಸಮೀಪದ ಭವಾನಿ ನಗರ ನಿವಾಸಿ ವೀರೇಶ್ ಅಲಿಯಾಸ್ ಸಾರಥಿ (30) ಹತ್ಯೆಯಾಗಿತ್ತು. ಕೊಲೆಯಾದ ವ್ಯಕ್ತಿಯ ತಾಯಿ ಕೊಟ್ಟ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸರು, ಘಟನೆಯಾದ 24 ಗಂಟೆಯಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.

ಸದರಿ ಪ್ರಕರಣದಲ್ಲಿ ಭಾಗಿಯಾದ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ನಗರ ಪೊಲೀಸ್ ಆಯುಕ್ತರಾದ ಡಾ.ಶರಣಪ್ಪ ಎಸ್.ಡಿ ಅವರು ಅಭಿನಂದನೆ ಸಲ್ಲಿಸಿ, ಅವರ ಕಾರ್ಯ ವೈಖರಿ ಬಗ್ಗೆ ಶ್ಲಾಘಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News