×
Ad

ಕಲಬುರಗಿ | ವಾಲಿಬಾಲ್ ಕ್ರೀಡೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

Update: 2025-10-09 19:14 IST

ಕಲಬುರಗಿ: ಆಳಂದ ತಾಲೂಕಿನ ಎನ್.ಎನ್.ತಾಂಡಾ (ಕೊರಳ್ಳಿ) ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿಯರು 2025-26ನೇ ಶೈಕ್ಷಣಿಕ ಸಾಲಿನಲ್ಲಿ ಅ.8ರ, 2025ರಂದು ಶ್ರೀ.ಚಂದ್ರಶೇಖರ ಪಾಟೀಲ್ ಕ್ರೀಡಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಬಾಲಕಿಯರ ಪ್ರಾಥಮಿಕ ವಿಭಾಗದ ವಾಲಿಬಾಲ್ ಕ್ರೀಡೆಯಲ್ಲಿ ಭಾಗವಹಿಸಿ, ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಈ ವಸತಿ ಶಾಲೆಯ ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಹಾಗೂ ಬಾಲಕಿಯರ ಪ್ರೌಢ ವಿಭಾಗದ ವಾಲಿಬಾಲ್ ಕ್ರೀಡೆಯಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದು ವಸತಿ ಶಾಲೆಗೆ ಕೀರ್ತಿ ತಂದಿರುವುದಕ್ಕಾಗಿ ಈ ವಸತಿ ಶಾಲೆಯ ಪ್ರಾಂಶುಪಾಲರಾದ ಪ್ರಶಾಂತ ಕಡಗಂಚಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ವಿದ್ಯಾರ್ಥಿನಿಯರ ಕ್ರೀಡೆಗಳಲ್ಲಿನ ಸಾಧನೆಗಾಗಿ ಸಿಬ್ಬಂದಿಗಳು ಹಾಗೂ ಕಲಬುರಗಿ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ಪ್ರೀತಿ ದೊಡ್ಡಮನಿ ಅವರು ಮೆಚ್ಚುಗೆಯನ್ನು ವ್ಯಕ್ತಪಡಿಸಿ ವಿದ್ಯಾರ್ಥಿಗಳ ಕ್ರೀಡಾ ಸಾಧನೆಯನ್ನು ಪ್ರಶಂಸಿಸಿದ್ದಾರೆ ಎಂದು ಆಳಂದ ತಾಲೂಕಿನ ಎನ್.ಎನ್.ತಾಂಡಾ (ಕೊರಳ್ಳಿ) ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News