×
Ad

Kalaburagi | 20 ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ

Update: 2026-06-29 18:32 IST

ಕಲಬುರಗಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26ನೇ ಸಾಲಿನಲ್ಲಿ ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಆಯ್ಕೆಯಾದ 10 ಅಂಧ ವಿದ್ಯಾರ್ಥಿಗಳಿಗೆ ಕಲಬುರಗಿ ಜಿಲ್ಲಾಧಿಕಾರಿಗಳಾದ ಇಕ್ರಮ್ ಶರೀಫ್ ಸೋಮವಾರ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಟಾಕಿಂಗ್ ಲ್ಯಾಪ್‍ಟಾಪ್‍ಗಳನ್ನು ವಿತರಿಸಿದರು.

ಅದೇ ರೀತಿ ಕಲಬುರಗಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ಶರಣಪ್ಪ ಸಂಕನೂರ ಅವರು ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆಯಡಿ ಆಯ್ಕೆಯಾದ 10 ಅಂಧ ವಿದ್ಯಾರ್ಥಿಗಳಿಗೆ ಕಲಬುರಗಿ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ಟಾಕಿಂಗ್ ಲ್ಯಾಪ್‍ಟಾಪ್‍ಗಳನ್ನು ವಿತರಿಸಿದರು.

ಈ ಸಂದರ್ಭದಲ್ಲಿ ಕಲಬುರಗಿ ಅಪರ ಜಿಲ್ಲಾಧಿಕಾರಿ ರಾಯಪ್ಪ ಹುಣಸಗಿ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಸಾದಿಕ್ ಹುಸೇನ್ ಖಾನ್, ಅಂಧ ಬಾಲಕರ ಸರ್ಕಾರಿ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಪ್ರಕಾಶ ಭಜಂತ್ರಿ ಸೇರಿದಂತೆ ಜಿಲ್ಲಾ ಅಂಗವಿಕಲರ ಕಲ್ಯಾಣ ಇಲಾಖೆಯ ಸಿಬ್ಬಂದಿ ಮೇಘಾಂಜಲಿ ಸೇರಿದಂತೆ ಆಯ್ಕೆಯಾದ 20 ಅಂಧ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News