ಕಲಬುರಗಿ | ಫಲಾನುಭವಿ ಆಧಾರಿತ ಯೋಜನೆಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ
ಕಲಬುರಗಿ: 2025-26ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಈ ಕೆಳಕಂಡ 13 ಫಲಾನುಭವಿ ಆಧಾರಿತ ಯೋಜನೆಗಳಡಿ ಸೌಲಭ್ಯ ಪಡೆಯಲು ಅರ್ಹ ವಿಕಲಚೇತನ ಫಲಾನುಭವಿಗಳಿಂದ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ನ.15 ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
ವಿವಿಧ ಫಲಾನುಭವಿ ಆಧಾರಿತ ಯೋಜನೆಗಳಾದ ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ ಯೋಜನೆ, ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದೋಗ ಭತ್ಯೆ, ಶಿಶು ಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಟಾಕಿಂಗ್ ಲ್ಯಾಪ್‍ಟಾಪ್ ಯೋಜನೆ, ದೃಷ್ಠಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೈಲ್‍ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ ಹಾಗೂ ದೈಹಿಕ ವಿಕಲಚೇತನರಿಗೆ ಬ್ಯಾಟರಿ ಚಾಲಿತ ವ್ಹೀಲ್‍ಚೇರ್ ದ್ವಿಚಕ್ರ ವಾಹನ ಯೋಜನೆಗಳಡಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ವಿಕಲಚೇತನ ಫಲಾನುಭವಿಗಳು ಆನ್‍ಲೈನ್ ಮೂಲಕ ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಮತ್ತು ಸೇವಾಸಿಂಧು https://sevasindhu.karnataka.gov.in/Sevasindhu/DepartmentServices Kannada ವೆಬ್‍ಸೈಟ್ ದಲ್ಲಿ ಆನ್‍ಲೈನ್ ಮೂಲಕ 2025ರ ನ.15 ರೊಳಗಾಗಿ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿಯನ್ನು ಹಾಗೂ ಕಚೇರಿ ಮೊಬೈಲ್ ಸಂಖ್ಯೆ: 08472-235222 ಗೆ ಸಂಪರ್ಕಿಸಲು ಕೋರಲಾಗಿದೆ.