×
Ad

ಕಲಬುರಗಿ | ಮಾ.15 ರವರೆಗೆ ಪುಸ್ತಕ ಖರೀದಿಯ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ವಿಸ್ತರಣೆ

Update: 2025-03-04 20:58 IST

ಕಲಬುರಗಿ : ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಮ್ಯಾಕ್ರೋ ಅನುದಾನದಲ್ಲಿ ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕ, ಲೇಖಕ/ಪ್ರಕಾಶಕರು ಪ್ರಕಟಿಸಿರುವ ಪುಸ್ತಕಗಳ ಖರೀದಿಗಾಗಿ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು 2025ರ ಮಾ.15ರ ಸಂಜೆ 5.30 ಗಂಟೆಯವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಸಮಿತಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ಈ ಹಿಂದೆ ಅರ್ಜಿ ಸಲ್ಲಿಕೆ ಕೊನೆಯ ದಿನಾಂಕವನ್ನು ಮಾ.2 ರಂದು ನಿಗದಿಪಡಿಸಲಾಗಿತ್ತು. ಕಲಬುರಗಿ ಜಿಲ್ಲೆಯ ಸ್ಥಳೀಯ ಲೇಖಕರು ಪುಸ್ತಕ ಸಲ್ಲಿಸುವ ಕೊನೆಯ ದಿನಾಂಕವನ್ನು ಮುಂದೂಡುವಂತೆ ಕಲಬುರಗಿ ಕ.ಕ.ಪ್ರ.ಅ.ಮಂಡಳಿ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿರುವ ಪ್ರಯುಕ್ತ (ಜಿಲ್ಲಾ ಮಟ್ಟದ ಪುಸ್ತಕ ಆಯ್ಕೆ ಸಮಿತಿ ಅಧ್ಯಕ್ಷರು ಆದ ಕಲಬುರಗಿ ಜಿಲ್ಲಾಧಿಕಾರಿಗಳ ಅನುಮೋದನೆಯೊಂದಿಗೆ) 2025ರ ಮಾ.15ರ ಸಂಜೆ 5.30 ಗಂಟೆಯೊಳಗಾಗಿ ಅರ್ಜಿ ಸಲ್ಲಿಸಬೇಕು.

ಇದಲ್ಲದೇ ಕಲಬುರಗಿ ಕ.ಕ.ಪ್ರ.ಅ.ಮಂಡಳಿ ಕಾರ್ಯದರ್ಶಿಗಳು ಬೆಂಗಳೂರಿನ ಕಬ್ಬನ ಪಾರ್ಕ್‍ನ ರಾಜ್ಯ ಕೇಂದ್ರ ಗ್ರಂಥಾಲಯ ಗ್ರಂಥ ಸ್ವಾಮ್ಯ ವಿಭಾಗದ ಮುಖ್ಯ ಗ್ರಂಥಾಲಯಾಧಿಕಾರಿಗಳಿಗೆ ಸೂಚಿಸಿರುವ ಪ್ರಯುಕ್ತ 2018 ರಿಂದ 2023ರ ವರೆಗೆ ಪ್ರಕಟಗೊಂಡ ಪುಸ್ತಕಗಳನ್ನು ಸಹ ನೋಂದಣಿ ಮಾಡಿಕೊಳ್ಳಲು ಕಾಲಾವಕಾಶವನ್ನು ನೀಡಿರುತ್ತಾರೆ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News