×
Ad

ಕಲಬುರಗಿ | ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ

Update: 2025-01-31 22:55 IST

ಕಲಬುರಗಿ : 2024-25ನೇ ಸಾಲಿಗೆ ಜ.30 ರಿಂದ ಫೆ.13 ರವರೆಗೆ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನದ ಅಂಗವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶರಣಬಸಪ್ಪ ಕ್ಯಾತನಾಳ ಅವರು ಬುಧವಾರ ಕಲಬುರಗಿ ನಗರದ ಮಹಾತ್ಮಾ ಗಾಂಧಿ ಕುಷ್ಠರೋಗ ಕಾಲೋನಿಯಲ್ಲಿ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿದರು.

ಕುಷ್ಠರೋಗಿಗಳಿಗೆ ಹಣ್ಣು, ಊಟ, ಮತ್ತು ಶಾಲು, ಔಷಧೊಪಚಾರ, ಎಂ.ಸಿ.ಆರ್. ಪಾದರಕ್ಷೆಗಳು ಮತ್ತು ಸೆಲ್ಫ್ ಕೇರ್ ಕಿಟ್‍ಗಳನ್ನು ವಿತರಿಸುವ ಮೂಲಕ ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ ಆಚರಿಸಲಾಯಿತು. ಇದೇ ಸಂದರ್ಭದಲ್ಲಿ ಎಲ್ಲರಿಗೂ ಪ್ರತಿಜ್ಞಾ ವಿಧಿ ಭೋಧಿಸಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರ್.ಸಿ.ಹೆಚ್. ಅಧಿಕಾರಿಗಳಾದ ಡಾ.ಸಿದ್ದು ಪಾಟೀಲ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವಶರಣಪ್ಪ, ಜಿಲ್ಲಾ ಕಾಲರಾ ನಿಯಂತ್ರಣಾಧಿಕಾರಿ ಡಾ.ವಿವೇಕಾನಂದ ರೆಡ್ಡಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಹಿರಿಯ ವೈದ್ಯಾಧಿಕಾರಿ ಡಾ.ವಿಜಯಲಕ್ಷ್ಮಿ ವಲ್ಯಾಪೂರೆ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳಾದ ಮಾರುತಿ ಕಾಂಬಳೆ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಾಣಿಕೇಶ್ವರಿ ಕಾಲೋನಿ ವೈದ್ಯಾಧಿಕಾರಿ ಡಾ.ಶೈಲಜಾ, ಜಿಲ್ಲಾ ಕುಷ್ಠರೋಗ ಅಧಿಕಾರಿಗಳ ಕಚೇರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.

Full View

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News