ಕಲಬುರಗಿ | 'ವಾರ್ತಾಭಾರತಿ'ಯ ಕಲ್ಯಾಣ ಕರ್ನಾಟಕ ಆವೃತ್ತಿ ಲೋಕಾರ್ಪಣೆ
ಕಲಬುರಗಿ: 'ವಾರ್ತಾ ಭಾರತಿ' ಕನ್ನಡ ದೈನಿಕದ ಕಲ್ಯಾಣ ಕರ್ನಾಟಕ ಆವೃತ್ತಿಯು ಶನಿವಾರ ಲೋಕಾರ್ಪಣೆಗೊಂಡಿತು.
ಇಲ್ಲಿನ ಡಾ.ಎಸ್.ಎಂ.ಪಂಡಿತ್ ರಂಗಮಂದಿರದಲ್ಲಿ ನಡೆಯುತ್ತಿರುವ ಅದ್ದೂರಿ ಕಾರ್ಯಕ್ರಮದಲ್ಲಿ 'ವಾರ್ತಾ ಭಾರತಿ' ಕನ್ನಡ ದೈನಿಕದ ಕಲ್ಯಾಣ ಕರ್ನಾಟಕ ಆವೃತ್ತಿಯನ್ನು 'THE WIRE' ಪ್ರಧಾನ ಸಂಪಾದಕ ಸಿದ್ಧಾರ್ಥ್ ವರದರಾಜನ್ ಲೋಕಾರ್ಪಣೆ ಮಾಡಿದರು.
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಡಾ.ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಿದರು.
ಬಹುಭಾಷಾ ನಟ, ಸಾಮಾಜಿಕ ಹೋರಾಟಗಾರ ಪ್ರಕಾಶ್ ರಾಜ್, ರಾಜ್ಯ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಸಚಿವ ಶರಣಬಸಪ್ಪಗೌಡ ದರ್ಶನಾಪುರ್, ರಾಜ್ಯ ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್, ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಹಾಗೂ ಆಳಂದ ಶಾಸಕ ಬಿ.ಆರ್ ಪಾಟೀಲ್, ರಾಜ್ಯ ವಕ್ಫ್ ಮಂಡಳಿ ಅಧ್ಯಕ್ಷ ಹಾಗೂ ಖ್ವಾಜಾ ಬಂದೇ ನವಾಝ್ ದರ್ಗಾದ ಸಜ್ಜಾದಾ ನಶೀನ್ ಹಝ್ರತ್ ಸೈಯದ್ ಮುಹಮ್ಮದ್ ಅಲಿ ಅಲ್ ಹುಸೈನಿ, ಕಲಬುರಗಿ ದಕ್ಷಿಣ ಶಾಸಕ ಅಲ್ಲಮಪ್ರಭು ಪಾಟೀಲ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದಾರೆ.
ಆಳಂದದ ತೋಂಟದಾರ್ಯ ಅನುಭವ ಮಂಟಪದ ಕೋರಣೇಶ್ವರ ಮಹಾಸ್ವಾಮೀಜಿ, ಕಲಬುರಗಿ ಬಿಷಪ್ ರೆ.ಫಾ.ರಾಬರ್ಟ್ ಮಿರಾಂಡ, ಆಣದೂರಿನ ಪೂಜ್ಯ ಭಂತೆ ವರಜ್ಯೋತಿ, ಸಾಮಾಜಿಕ ಹೋರಾಟಗಾರ್ತಿ ಕೆ.ನೀಲಾ, ರೈತ ಸಂಘದ ಮುಖಂಡ ಚಾಮರಸ ಮಾಲಿ ಪಾಟೀಲ್, ಡಿಎಸ್ಎಸ್ ರಾಜ್ಯ ಸಂಚಾಲಕ ಡಿ.ಜಿ.ಸಾಗರ್, ಹೋರಾಟಗಾರ, ಗಾಯಕ ಅಂಬಣ್ಣ ಆರೋಲಿಕರ್ ವಿಶೇಷ ಅತಿಥಿಗಳಾಗಿ ವೇದಿಕೆಯ ಮೇಲೆ ಉಪಸ್ಥಿತರಿದ್ದಾರೆ.
ವಾರ್ತಾ ಭಾರತಿ ಸ್ಥಾಪಕ ನಿರ್ದೇಶಕ ಯಾಸೀನ್ ಮಲ್ಪೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಾಧ್ಯಮ ಕಮ್ಯುನಿಕೇಶನ್ಸ್ ಅಧ್ಯಕ್ಷ ಎಚ್.ಎಂ.ಅಪ್ರೋಝ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದಾರೆ. ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ ಉಪಸ್ಥಿತರಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರಗತಿಪರ ಚಿಂತಕರು, ಸಾಮಾಜಿಕ ಹೋರಾಟಗಾರರು, ರೈತ, ಕಾರ್ಮಿಕ, ವಿದ್ಯಾರ್ಥಿಯ ಸಂಘಟನೆಯ ಹೋರಾಟಗಾರರು ಸೇರಿದಂತೆ ವಿವಿಧ ಜಿಲ್ಲೆ, ತಾಲೂಕುಗಳ ಓದುಗ, ವೀಕ್ಷಕರು ಪಾಲ್ಗೊಂಡಿದ್ದಾರೆ.