×
Ad

ಕಲಬುರಗಿ| ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಆರೋಪ: ಉಪನ್ಯಾಸಕನ ಬಂಧನ

Update: 2026-01-04 22:02 IST

ಸಾಂದರ್ಭಿಕ ಚಿತ್ರ

ಕಲಬುರಗಿ(ಅಫಜಲಪುರ): ಹೊಸ ವರ್ಷದ ಗಿಫ್ಟ್ ಕೊಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಉಪನ್ಯಾಸಕನೋರ್ವನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ.  

ಅಫಜಲಪುರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಪದವಿಪೂರ್ವ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ವಿಷಯದ ಬೋಧಕ ರಾಜಕುಮಾರ್‌ ಕುಂಬಾರ ಬಂಧಿತ ಆರೋಪಿ.

ಜನವರಿ 1ರಂದು ವಿದ್ಯಾರ್ಥಿನಿಗೆ ಹೊಸ ವರ್ಷದ ಗಿಫ್ಟ್ ಕೊಡುವುದಾಗಿ ಪುಸಲಾಯಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪ ರಾಜಕುಮಾರ್‌ ವಿರುದ್ಧ ವ್ಯಕ್ತವಾಗಿತ್ತು. ಈ ಕುರಿತು ಅಫಜಲಪುರದಲ್ಲಿ ಶನಿವಾರ ಪ್ರಕರಣವೂ ದಾಖಲಾಗಿತ್ತು.

ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆಂದು ಪೊಲೀಸ್ ಮೂಲಗಳು ತಿಳಿಸಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News