ಕಲಬುರಗಿ | ಸೆ.4 ರಂದು ನೇರ ಸಂದರ್ಶನ
ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆ.4ರಂದು ಬೆಳಿಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಕಲಬುರಗಿಯ ಹುಮನಾಬಾದ್ ರಸ್ತೆಯ ಶಹಾ ಹೊಂಡೈ ಶೋರುಮ್‌ನಲ್ಲಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ನೇರ ಸಂದರ್ಶನದಲ್ಲಿ ಭಾಗವಹಿಸುವ ಕಂಪನಿಗಳ ವಿವರ :
ಮೆಡ್‍ಪ್ಲಸ್ ನಲ್ಲಿ ಫಾರ್ಮಾಸಿಸ್ಟ್ ಹುದ್ದೆಗೆ ಡಿ/ಬಿ ಫಾರ್ಮಾ ವಿಥ್ ಪಿಸಿಐ ವಿದ್ಯಾರ್ಹತೆ ಹೊಂದಿರಬೇಕು. ಫಾರ್ಮಾಸಿ ಎಡ್ ಹುದ್ದೆಗೆ ಎಸೆಸೆಲ್ಸಿ, ಪಿಯುಸಿ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಸಿ.ಎಸ್.ಎ. ಹುದ್ದೆಗೆ ಎಸೆಸೆಲ್ಸಿ, ಪಿಯುಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 30 ವರ್ಷದೊಳಗಿರಬೇಕು.
ಗುರು ದಿಕ್ಷಾ ಅಕಾಡೆಮಿಯಲ್ಲಿ ಶಿಕ್ಷಕ, ಆಪ್ತ ಸಮಾಲೋಚಕ, ಮಾರ್ಕೆಟಿಂಗ್ ಎಕ್ಸಿಕ್ಯೊಟಿವ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ಆಫೀಸ್ ಬಾಯ್ ಹುದ್ದೆಗೆ ಎಸೆಸೆಲ್ಸಿ ವಿದ್ಯಾರ್ಹತೆ ಹೊಂದಿರಬೇಕು.
ಲಾಹೋಟಿ ಮೋಟಾರ್ಸ್ ನಲ್ಲಿ ರಿಲೇಷನ್‍ಶಿಫ್ ಮ್ಯಾನೇಜರ್ ಹಾಗೂ ರಿಷೇಪ್ಶನಿಸ್ಟ್/ ಶೋರೂಮ್ ಹೊಸ್ಟೆಸ್ಸ್ ಹುದ್ದೆಗಳಿಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 40 ವರ್ಷದೊಳಗಿರಬೇಕು.
ಎಸ್.ಡಿ.ಡಿ.ಓ.ಎಮ್ ಚಿಟ್ ಫಂಡ್ ಪ್ರೈ.ಲೀ.ದಲ್ಲಿ ಏಜೆಂಟ್ ಹುದ್ದೆಗೆ ಎಸೆಸೆಲ್ಸಿ/ ಪಿಯುಸಿ/ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 60 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝೆರಾಕ್ಸ್, ರೆಸ್ಯೂಮ್ (ಬಯೋಡಟಾ) ಭಾವಚಿತ್ರಗಳು ಹಾಗೂ ಆಧಾರ್ ಕಾರ್ಡ್ ನೊಂದಿಗೆ ಮೇಲ್ಕಂಡ ದಿನದಂದು ನೇರ ಸಂರ್ದಶನದಲ್ಲಿ ಭಾಗವಹಿಸಬೇಕು. ನೇರ ಸಂರ್ದಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.