ಕಲಬುರಗಿ | ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ; ಪರಿಶೀಲನೆ
ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರರ ಮನೆಗೆ ಜೂ.24ರಂದು ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕಲಬುರಗಿ: ಮುಂದಿನ ನಾಲ್ಕು ದಿನಗಳಲ್ಲಿ ನಿವೃತಿಯಾಗಲಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇಂಜಿನಿಯರಿಂಗ್ ವಿಭಾಗದ ಇಇ ಮಲ್ಲಿಕಾರ್ಜುನ ಅಲಿಪುರ ಅವರ ಬೆಂಗಳೂರಿನ ಮನೆ ಹಾಗೂ ಕಲಬುರಗಿ ಮನೆ, ಕಚೇರಿ ಹಾಗೂ ಸಣ್ಣೂರು ಗ್ರಾಮದ ಪಿಡಿಒ ರಾಮಚಂದ್ರರ ಮನೆ ಮೇಲೆ ಲೋಕಾಯುಕ್ತ ಪೊಲೀಸರು ಮಂಗಳವಾರ ಮುಂಜಾನೆ ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಆರೋಪದ ದೂರಿನ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.
ಇಇ ಮಲ್ಲಿಕಾರ್ಜುನ ಅಲಿಪುರ ಮನೆ ಮೇಲೆ ದಾಳಿ ಮಾಡಿರುವ ಲೋಕಾಯುಕ್ತ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕಲಬುರಗಿ ತಾಲೂಕಿನ ಸಣ್ಣೂರು ಗ್ರಾಮದ ಪಿಡಿಓ ರಾಮಚಂದ್ರರಿಗೆ ಸೇರಿದ್ದೆನ್ನಲಾದ ಸೇಡಂ ರಸ್ತೆಯ ಮಾನಸ ರೆಸಿಡೆನ್ಸಿ ಮತ್ತು ವಿಜಯಪುರ ಜಿಲ್ಲೆಯ ಬೊಮ್ಮನಹಳ್ಳಿ ಗ್ರಾಮದ ಮನೆ ಮೇಲೆ ದಾಳಿ ನಡೆಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಎರಡು ದಾಳಿಯಲ್ಲಿ ನಾಲ್ಕು ಪೊಲೀಸ್ ಅಧಿಕಾರಿಗಳ ತಂಡಗಳು ಪ್ರತ್ಯೇಕವಾಗಿ ದಾಖಲೆ ಪರಿಶೀಲನೆ ಮಾಡುತ್ತಿದೆ ಎಂದು ಲೋಕಾಯುಕ್ತ ಮೂಲಗಳು ತಿಳಿಸಿವೆ.
ಕಲಬುರಗಿ ಲೋಕಾಯುಕ್ತ ಎಸ್ಪಿ ಬಿ.ಕೆ.ಉಮೇಶ್, ಡಿವೈಎಸ್ ಪಿ ಗೀತಾ ಬೇನಾಳ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.