ಕಲಬುರಗಿ| ಲಾರಿ ಅಪಘಾತ : ಚಾಲಕನಿಗೆ ಗಂಭೀರ ಗಾಯ
Update: 2025-09-06 19:09 IST
ಕಲಬುರಗಿ: ಲಾರಿಯೊಂದಕ್ಕೆ ಹಿಂಬದಿಯಿಂದ ಮತ್ತೊಂದು ಲಾರಿಗೆ ಢಿಕ್ಕಿ ಹೊಡೆದು ಸಂಭವಿಸಿದ ಅಪಘಾತದಲ್ಲಿ ಲಾರಿ ಚಾಲಕ ಗಂಭೀರ ಗಾಯಗೊಂಡಿರುವ ಘಟನೆ ಜೇವರ್ಗಿ ಪಟ್ಟಣದ ಬೈಪಾಸ್‌ನಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಚಾಲಕ ಲಾರಿಯಡಿ ಸಿಲುಕಿದ್ದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಶಾಮಕ ಸಿಬ್ಬಂದಿ ಚಾಲಕನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.