×
Ad

ಕಲಬುರಗಿ: ಲಾರಿ-ಬೈಕ್ ಢಿಕ್ಕಿ: ಯುವಕ ಮೃತ್ಯು

Update: 2024-02-04 15:22 IST

ಕಲಬುರಗಿ: ಲಾರಿ ಮತ್ತು ಬೈಕ್ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಚಿತ್ತಾಪುರ ತಾಲ್ಲೂಕಿನ ಲಾಡ್ಲಾಪುರ ಹಲಕರ್ಟಿ ಮಧ್ಯೆ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಶನಿವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.

ಮೃತಪಟ್ಟ ಯುವಕನನ್ನು ಪಟ್ಟಣದ 6ನೇ ವಾರ್ಡ್ ನಿವಾಸಿ ಸೂರ್ಯಕಾಂತ ಭೀಮರಾಯ ಮುಂಡರಗಿ(21) ಎಂದು ಗುರುತಿಸಲಾಗಿದೆ.

ಯಾದಗಿರಿಯ ಪ್ರಗತಿ ಪದವಿ ಕಾಲೇಜಿನಲ್ಲಿ ಬಿ.ಎ ಅಂತಿಮ ವರ್ಷದ ವಿದ್ಯಾರ್ಥಿಯಾಗಿದ್ದ ಈತ   ಕಾಲೇಜ್‌ ನಿಂದ ವಾಡಿ ಕಡೆ ತೆರಳುತ್ತಿದ್ದಾಗ ಎದುರಿಗೆ ವೇಗವಾಗಿ ಬಂದ ಸಿಮೆಂಟ್ ತುಂಬಿದ ಲಾರಿ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡ ಆತ  ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಸ್ಥಳಕ್ಕೆ ವಾಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News