ಕಲಬುರಗಿ: ಆಳಂದ ತಾಲೂಕಿನ ನಾಗಲೇಗಾಂವ್ ಗ್ರಾಮದ ಸಮೀಪದ ಬ್ಲ್ಯೂ ಫೈನ್ ಪವರ್ ವಿಂಡ್ ಕಂಪನಿಯ ಗೇಟ್ ಬಳಿ ರಾತ್ರಿ ವೇಳೆ ಮಲಗಿದ್ದ ಇಬ್ಬರು ಭದ್ರತಾ ಸಿಬ್ಬಂದಿ ಮೇಲೆ ಲಾರಿ ಹರಿದ ಪರಿಣಾಮ ಇಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.

ಮೃತರನ್ನು ನಾಗಲೇಗಾಂವ್ ಗ್ರಾಮದ ಸಂತೋಷ ಶಿವಪದ ಕಲಬುರಗಿ (45) ಹಾಗೂ ಸಂಗಯ್ಯ ಸ್ವಾಮಿ (46) ಎಂದು ಗುರುತಿಸಲಾಗಿದೆ.

ರಾತ್ರಿ ಕರ್ತವ್ಯದಲ್ಲಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‌ಗಳು ಕಂಪನಿಯ ಗೇಟ್ ಬಳಿ ಮಲಗಿದ್ದ ವೇಳೆ ಲಾರಿ ಅವರ ಮೇಲೆ ಹರಿದಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಇಬ್ಬರೂ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ಬಳಿಕ ಲಾರಿ ಚಾಲಕ ವಾಹನವನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಡಿವೈಎಸ್ಪಿ ತಮ್ಮರಾಯ ಪಾಟೀಲ, ಪಿಎಸ್ಐ ಮಹಾಂತೇಶ ಪಾಟೀಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಕುರಿತು ಮಾದನ ಹಿಪ್ಪರಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪರಾರಿಯಾಗಿರುವ ಲಾರಿ ಚಾಲಕನ ಪತ್ತೆಗೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor