ಕಲಬುರಗಿ: ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ)ದ ಕಲಬುರಗಿ ನಗರ ಪ್ರಧಾನ ಸಂಚಾಲಕರಾಗಿ ಎಂ. ನಂದಕುಮಾರ ತಳಕೇರಿ ಅವರನ್ನು ನೇಮಕ ಮಾಡಲಾಗಿದೆ.

ಸಂಘಟನೆಯ ರಾಜ್ಯ ಪ್ರಧಾನ ಸಂಚಾಲಕ ಎಂ. ಗೋವಿಂದರಾಜ್ ಅವರ ಆದೇಶದ ಮೇರೆಗೆ ಈ ನೇಮಕಾತಿ ಮಾಡಲಾಗಿದೆ. ಸಂಘಟನೆಯ ಆಶಯ ಹಾಗೂ ಉದ್ದೇಶಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಮತ್ತು ಸಾಮಾಜಿಕ ನ್ಯಾಯಕ್ಕಾಗಿ ನಡೆಯುವ ಹೋರಾಟಗಳನ್ನು ಸಂಘಟಿತವಾಗಿ ಮುನ್ನಡೆಸುವ ಜವಾಬ್ದಾರಿಯನ್ನು ನೂತನ ಪ್ರಧಾನ ಸಂಚಾಲಕರಿಗೆ ವಹಿಸಲಾಗಿದೆ.

ನೂತನ ಜವಾಬ್ದಾರಿ ವಹಿಸಿಕೊಂಡಿರುವ ಎಂ. ನಂದಕುಮಾರ ತಳಕೇರಿ ಅವರಿಗೆ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಪರಿವರ್ತನವಾದ) ರಾಜ್ಯ ಸಮಿತಿಯ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಅಭಿನಂದಿಸಿ, ಶುಭ ಹಾರೈಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor