×
Ad

ಕಲಬುರಗಿ | ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ

Update: 2025-06-26 17:34 IST

ಕಲಬುರಗಿ: ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ವ್ಯಕ್ತಿಯೊರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಅಫಜಲಪುರ ತಾಲೂಕಿನ ಹವಳಗಾ ಗ್ರಾಮದ ಎಸ್‌ಬಿ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

ಜೇವರ್ಗಿ ಪಟ್ಟಣ ಮೂಲದ ಜಗನ್ನಾಥ್ (42) ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ ಎಂದು ತಿಳಿದುಬಂದಿದೆ.

ಬೆಳಗ್ಗೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಮನೆಯಿಂದ ಹೊರಬಂದಿದ್ದ ಜಗನ್ನಾಥ್ ಹವಳಗಾ ಗ್ರಾಮದ ಬಳಿ ಬ್ಲೇಡ್‌ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

ಜಗನ್ನಾಥ್‌ ಅವರನ್ನು ಅಫಜಲಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಆರು ತಿಂಗಳಿನಿಂದ ಘತ್ತರಗಿ ಗ್ರಾಮದಲ್ಲಿ ಜಗನ್ನಾಥ್ ಆತನ ಪತ್ನಿಯೊಂದಿಗೆ ವಾಸವಾಗಿದ್ದ ಎನ್ನಲಾಗಿದೆ.

ಸ್ಥಳಕ್ಕೆ ಅಫಜಲಪುರ ಪೊಲೀಸರ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News