Kalaburagi | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆ

Update: 2026-07-27 13:28 IST

ಕಲಬುರಗಿ: ವ್ಯಕ್ತಿಯೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಗರದ ಗುಬ್ಬಿ ಕಾಲನಿಯ ಸುಷ್ಮಾ ಬಾರ್ ಸಮೀಪ ರವಿವಾರ ರಾತ್ರಿ ನಡೆದಿದೆ.

ಕೊಲೆಯಾದವರನ್ನು ಆದರ್ಶ ನಗರದ ನಿವಾಸಿ ರವಿಚಂದ್ರ ತಿಪ್ಪಯ್ಯ ಗುತ್ತೇದಾರ್ (47) ಎಂದು ಗುರುತಿಸಲಾಗಿದೆ.

ಮೂವರು ಅಪರಿಚಿತರು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರವಿಚಂದ್ರರನ್ನು ಕೊಲೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಈ ಹಿಂದೆ ರವಿಚಂದ್ರರ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದ್ದು, ಅದೇ ಪ್ರಕರಣಕ್ಕೆ ಸಂಬಂಧಿಸಿದ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೃತ್ಯ ನಡೆದಿರಬಹುದೆಂಬ ಅನುಮಾನ ವ್ಯಕ್ತವಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂಬಂಧ ಎಂ.ಬಿ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News