×
Ad

ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಹತ್ಯೆ

Update: 2025-03-13 00:11 IST

ಕಲಬುರಗಿ : ಬೈಕ್ ಅಡ್ಡಗಟ್ಟಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದ ಘಟನೆ ನಗರದ ಖಾದ್ರಿ ಚೌಕ್ ಬಳಿ ನಡೆದಿದೆ.

ಖಾದ್ರಿ ಚೌಕ್ ಬಳಿಯ ನಬಿ ಕಾಲೋನಿ ನಿವಾಸಿ ಇಮ್ರಾನ್ ಸೈಯದ್ (28) ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ.

ಬುಧವಾರ ರಾತ್ರಿ 10 ಗಂಟೆ ಸುಮಾರಿಗೆ ಬೈಕ್ ಮೇಲೆ ತೆರಳುವಾಗ ಇಮ್ರಾನ್ ನನ್ನು ಅಡ್ಡಗಟ್ಟಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.

ಕೊಲೆಯಾದ ವ್ಯಕ್ತಿ ಮೇಲೆ ನಗರದ ವಿವಿಧ ಠಾಣೆಗಳಲ್ಲಿ ವಿವಿಧ ಪ್ರಕರಣಗಳು ದಾಖಲಾಗಿವೆ ಎನ್ನಲಾಗಿದೆ. ಇನ್ನೂ ಘಟನಾ ಸ್ಥಳಕ್ಕೆ ಡಿಸಿಪಿ ಕನಿಕಾ ಸಿಕ್ರಿವಾಲ್ ಸೇರಿದಂತೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ  ಬೀಸಿದ್ದಾರೆ.

ಈ ಕುರಿತು ಚೌಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News