×
Ad

ಕಲಬುರಗಿ | ಮಾಣಿಕ ಎಸ್. ಕನಕಟ್ಟೆಗೆ ಬೀಳ್ಕೊಡುಗೆ

Update: 2026-06-06 19:29 IST

ಕಲಬುರಗಿ: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆಯ ಅಧೀಕ್ಷಕ ಅಭಿಯಂತರರಾದ ಮಾಣಿಕ ಎಸ್. ಕನಕಟ್ಟೆ ಅವರು ಸರಕಾರಿ ಸೇವೆಯಿಂದ ವಯೋನಿವೃತ್ತಿ ಹೊಂದುತ್ತಿರುವ ಹಿನ್ನೆಲೆಯಲ್ಲಿ ನಗರದ ಇನ್‌ಸ್ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಶನಿವಾರ ಗೌರವಪೂರ್ವಕ ಬೀಳ್ಕೊಡುಗೆ ನೀಡಲಾಯಿತು.

ಕಾರ್ಯಕ್ರಮವನ್ನು ಕಾಡಾ ಆಡಳಿತಾಧಿಕಾರಿ ಡಾ.ಸುರೇಶ್ ಎಲ್. ಶರ್ಮಾ ಹಾಗೂ ಕೃಷ್ಣಾ ಭಾಗ್ಯ ಜಲನಿಗಮದ ಮುಖ್ಯ ಇಂಜಿನಿಯರ್ ಕೆ.ಎಸ್. ಅಭಿಮನ್ಯು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಇಲಾಖೆಯಲ್ಲಿ ದೀರ್ಘಕಾಲ ಸೇವೆ ಸಲ್ಲಿಸಿರುವ ಮಾಣಿಕ ಎಸ್. ಕನಕಟ್ಟೆ ಅವರು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ಮಹತ್ವದ ಕೊಡುಗೆ ನೀಡಿದ್ದು, ತಮ್ಮ ಕಾರ್ಯನಿಷ್ಠೆ, ಪ್ರಾಮಾಣಿಕತೆ ಮತ್ತು ಜನಪರ ಸೇವೆಯ ಮೂಲಕ ಸಹೋದ್ಯೋಗಿಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಶ್ಲಾಘಿಸಿದರು.

ಸರಕಾರಿ ಸೇವೆಯ ಅವಧಿಯಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಇಲಾಖೆಯ ಪ್ರಗತಿಗೆ ಅವರು ನೀಡಿದ ಕೊಡುಗೆ ಸ್ಮರಣೀಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕಾರ್ಯಕ್ರಮದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ, ಲೋಕೋಪಯೋಗಿ ಇಲಾಖೆಯ ಮುಖ್ಯ ಇಂಜಿನಿಯರ್ ಸುಭಾಷ ಶಿಕ್ಷಣಕರ್, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ರಜನಿಕಾಂತ ಶ್ರೀಂಗೇರಿ, ಜಗನ್ನಾಥ ಹಾಲಂಗೆ, ಶರಣಪ್ಪ ಸುಲಗುಂಟೆ, ವಿಜಯದಶರಥ ಸಂಗನ, ಶಿವಶಂಕ್ರಪ್ಪ ಗುರಗುಂಟಿ, ಮಲ್ಲಿಕಾರ್ಜುನ ಸಂಗಾವಿ, ಎಂ.ಎಸ್. ಮಲ್ಲಿಕಾರ್ಜುನ, ಚನ್ನಪ್ಪ ಮುನ್ನೋಳ್ಳಿ, ರೇವಣಸಿದ್ದಪ್ಪ, ನೀಲಕಂಠ ಜಮಾದಾರ ಸೇರಿದಂತೆ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು, ಸಮಾಜದ ಮುಖಂಡರು ಹಾಗೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News