×
Ad

ಕಲಬುರಗಿ | ಅಂಬಿಗರ ಚೌಡಯ್ಯ ಗೆಳೆಯರ ಬಳಗದಿಂದ ಬೃಹತ್ ಪ್ರತಿಭಟನೆ

Update: 2025-10-13 19:22 IST

ಕಲಬುರಗಿ: ಶಾಹಾಬದ ತಾಲೂಕಿನ ಮುತ್ತಗಿ ಗ್ರಾಮದಲ್ಲಿ ಅಂಬಿಗರ ಚೌಡಯ್ಯನವರ ಮೂರ್ತಿ ಗೆ ಹಾನಿಗೊಳಿಸಿರುವುದನ್ನು ಖಂಡಿಸಿ ಶ್ರೀ ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿ ವತಿಯಿಂದ ಗಂಗಾನಗರದ ಜಗತ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.

ಅಂಬಿಗರ ಚೌಡಯ್ಯನವರ ಮೂರ್ತಿಗೆ ಹಾನಿಗೊಳಿಸಿದ ಸಮಾಜ ದ್ರೋಹಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಮುತ್ತಗಾ ಗ್ರಾಮದ ಅದೇ ಸ್ಥಳದಲ್ಲಿ ಭವ್ಯವಾದ ಮೂರ್ತಿಯನ್ನು ಸ್ಥಾಪನೆ ಮಾಡಿ ಸರಕಾರದ ವತಿಯಿಂದ ರಕ್ಷಣೆ ಒದಗಿಸಬೇಕು. ಒಂದು ವೇಳೆ ಈ ನಮ್ಮ ಬೇಡಿಕೆಯನ್ನು ಕೂಡಲೇ ಈಡೇರಿಸದೆ ಇದ್ದಲ್ಲಿ ಜಿಲ್ಲೆಯಾದ್ಯಂತ ಬಂದ್ ಮಾಡುವ ಮೂಲಕ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು. ಈ ಹೋರಾಟದ ಸಮಯದಲ್ಲಿ ಅನಾಹುತ ಸಂಭವಿಸಿದ್ದರೆ ಇದಕ್ಕೆ ಸರಕಾರವೇ ಹೊಣೆಯಾಗುತ್ತದೆ. ಇದಕ್ಕೆ ಸರಕಾರ ಅವಕಾಶ ಮಾಡಿಕೊಡಬಾರದು ಎಂದು ಮನವಿಯಲ್ಲಿ ಎಚ್ಚರಿಸಿದ್ದಾರೆ.

ಅಂಬಿಗರ ಚೌಡಯ್ಯ ಗೆಳೆಯರ ಬಳಗ ಗಂಗಾನಗರ ಕಲಬುರಗಿಯ ಅಧ್ಯಕ್ಷ ರಮೇಶ ಜಮಾದಾರ್‌, ಕಾರ್ಯಾಧ್ಯಕ್ಷ ರಾಕೇಶ್ ಜಮಾದಾರ್ ಸೇರಿದಂತೆ ಸಮಾಜದ ಮುಖಂಡರು ಯುವಕರು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News