ಕಲಬುರಗಿ: ಇಎಸ್ಐಸಿ ಆಸ್ಪತ್ರೆಯಲ್ಲಿ ಬಾಣಂತಿ ಸಾವು
Update: 2025-02-26 20:04 IST
ಶಿಲ್ಪಾ
ಕಲಬುರಗಿ: ಇಲ್ಲಿನ ಸೇಡಂ ರಸ್ತೆಯಲ್ಲಿರುವ ಇಎಸ್ಐಸಿ ಆಸ್ಪತ್ರೆಯಲ್ಲಿ ಲೋ ಬಿಪಿಯಿಂದ ಬಾಣಂತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಚಿತ್ತಾಪುರ ತಾಲೂಕಿನ ತೊನಸನಹಳ್ಳಿ ಗ್ರಾಮದ ನಿವಾಸಿ ಶಿಲ್ಪಾ(32) ಮೃತಪಟ್ಟವರು.
ಸೋಮವಾರ ಹೆರಿಗೆಗೆಂದು ಇಎಸ್ಐಸಿ ಆಸ್ಪತ್ರೆಗೆ ದಾಖಲಾಗಿದ್ದ ಶಿಲ್ಪ, ಅಂದೇ ಗಂಡು ಮಗುವಿಗೆ ಜನ್ಮ ನೀಡಿದ್ದರು. ನಿರಂತರ ರಕ್ತ ನೀಡಿದರೂ ಚಿಕಿತ್ಸೆ ಫಲಕಾರಿಯಾಗದೆ ಮಂಗಳವಾರ ಬೆಳಗ್ಗೆ ಶಿಲ್ಪಾ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.