×
Ad

Kalaburagi | ಪತ್ರಕರ್ತ ಭೀಮಾಶಂಕರ ಅವರ ಮಾಧ್ಯಮ ಅಕಾಡೆಮಿ ಪುಸ್ತಕ ಬಿಡುಗಡೆ

‘ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ’ ಪುಸ್ತಕ ಅನಾವರಣ

Update: 2026-07-02 17:38 IST

ಕಲಬುರಗಿ: ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ 2025-26ನೇ ಸಾಲಿನ ಫೆಲೋಶಿಪ್ ಯೋಜನೆಯಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಕಲಬುರಗಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಫಿರೋಜಾಬಾದ ಅವರು ರಚಿಸಿರುವ ‘ಕಲ್ಯಾಣ ಕರ್ನಾಟಕ ಪ್ರವಾಸೋದ್ಯಮ ಅಭಿವೃದ್ಧಿಯಲ್ಲಿ ಮಾಧ್ಯಮಗಳ ಪಾತ್ರ’ ಕೃತಿಯನ್ನು ಬೆಂಗಳೂರಿನ ಗಾಂಧಿ ಭವನದಲ್ಲಿ ಬುಧವಾರ ಬಿಡುಗಡೆ ಮಾಡಲಾಯಿತು.

ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ನಡೆದ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮಾಜಿ ಸಚಿವ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಅವರು ಪುಸ್ತಕವನ್ನು ಬಿಡುಗಡೆಗೊಳಿಸಿದರು.

ಬಳಿಕ ಕಾರ್ಯಕ್ರಮಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಹಾಗೂ ಉತ್ತಮ ಸಮಾಜ ನಿರ್ಮಾಣದಲ್ಲಿ ಮಾಧ್ಯಮಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೆಲಂಗಾಣ ಮಾಧ್ಯಮ ಅಕಾಡೆಮಿ ಅಧ್ಯಕ್ಷ ಶ್ರೀನಿವಾಸ ರಡ್ಡಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ, ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್ ಪುತ್ತಿಗೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಶಿವಾನಂದ ತಗಡೂರು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ.‌ಪುರುಷೋತ್ತಮ ಬಿಳಿಮಲೆ, ಅಕಾಡೆಮಿ ಕಾರ್ಯದರ್ಶಿ ಸಹನಾ ಮಜ್ಜಿ, ಉಡುಪಿ ಕೃಷ್ಣ, ಪೂರ್ಣಿಮಾ ಸೇರಿ ಅನೇಕರು ಹಾಜರಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News