×
Ad

ಕಲಬುರಗಿ | ಆ.1 ರಿಂದ ಮಾನಸಿಕ ಆರೋಗ್ಯ ಶಿಬಿರ ಆಯೋಜನೆ

Update: 2025-07-30 21:55 IST

ಸಾಂದರ್ಭಿಕ ಚಿತ್ರ

ಕಲಬುರಗಿ: ಕಲಬುರಗಿ ಜಿಲ್ಲೆಯಲ್ಲಿ ಮಾನಸಿಕ ಆರೋಗ್ಯ ಶಿಬಿರ ಮನೋಚೈತನ್ಯ ಕಾರ್ಯಕ್ರಮದಡಿ ಕಲಬುರಗಿ ಜಿಲ್ಲೆಯ ಎಲ್ಲಾ ತಾಲೂಕು ಸಾರ್ವಜನಿಕ ಆಸ್ಪತ್ರೆ, ಎಲ್ಲಾ ಸಮೂದಾಯ ಆರೋಗ್ಯ ಕೇಂದ್ರ ಹಾಗೂ ಎಲ್ಲಾ ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ 2025ರ ಆ.1 ರಿಂದ 29 ರವರೆಗೆ ಮಾನಸಿಕ ಆರೋಗ್ಯ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕಲಬುರಗಿ ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ ಅಧಿಕಾರಿಗಳು ತಿಳಿಸಿದ್ದಾರೆ.

ತಪಾಸಣಾ ಶಿಬಿರದ ವಿವರ ಇಂತಿದೆ. ಆಗಸ್ಟ್ 1 ರಂದು ಕಮಲಾಪುರ ಪ್ರಾಥಮಿಕ ಆರೋಗ್ಯ ಆಸ್ಪತ್ರೆ, ಆಗಸ್ಟ್ 2 ರಂದು ಕಲಬುರಗಿ ಕಾರಾಗೃಹ, ಆಗಸ್ಟ್ 5 ರಂದು ಆಳಂದ ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 8 ರಂದು ಅಫಜಲಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 9 ರಂದು ಕಲಬುರಗಿ ಕೇಂದ್ರ ಕಾರಾಗೃಹ, ಆಗಸ್ಟ್ 11 ರಂದು ದೇವಲ್ ಗಾಣಗಾಪುರ ಸಂಗಮ್, ಆಗಸ್ಟ್ 12 ರಂದು ಚಿಂಚೋಳಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 14 ರಂದು ಜೇವರ್ಗಿ ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 16 ರಂದು ಕಲಬುರಗಿ ಕೇಂದ್ರ ಕಾರಾಗೃಹ, ಆಗಸ್ಟ್ 19 ರಂದು ಚಿತ್ತಾಪುರ ತಾಲೂಕು ಸಾರ್ವಜನಿಕ ಆಸ್ಪತ್ರೆ, ಆಗಸ್ಟ್ 22 ರಂದು ಕಾಳಗಿ ಸಮುದಾಯ ಆರೋಗ್ಯ ಕೇಂದ್ರ, ಆಗಸ್ಟ್ 23 ರಂದು ಕಲಬುರಗಿ ಕೇಂದ್ರ ಕಾರಾಗೃಹ, ಆಗಸ್ಟ್ 26 ರಂದು ಸೇಡಂ ತಾಲೂಕು ಸಾರ್ವಜನಿಕ ಆಸ್ಪತ್ರೆ ಹಾಗೂ ಆಗಸ್ಟ್ 29 ರಂದು ಶಹಾಬಾದ ಸಮುದಾಯ ಆರೋಗ್ಯ ಕೇಂದ್ರ.

ಮಾನಸಿಕ ಕಾಯಿಲೆಗಳ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಗಳನ್ನು ಸಮುದಾಯದಲ್ಲಿ ಗುರುತಿಸಿ ಅವರನ್ನು ಈ ಶಿಬಿರ ನಡೆಯುವ ದಿನಾಂಕದಂದು ಕರೆತಂದು ತಜ್ಞರಿಗೆ ತೋರಿಸಿ ಚಿಕಿತ್ಸೆ ಕೊಡಿಸಬೇಕು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News