×
Ad

ಕಲಬುರಗಿ | ಆಳಂದ ತಾಲ್ಲೂಕಿನ ಚಿಂಚನಸೂರಿನಲ್ಲಿ 2.3 ತೀವ್ರತೆಯ ಲಘು ಭೂಕಂಪನ

Update: 2025-09-11 15:25 IST

ಕಲಬುರಗಿ: ಆಳಂದ ತಾಲ್ಲೂಕಿನ ಚಿಂಚನಸೂರು ಗ್ರಾಮದ ಸುತ್ತಮುತ್ತಲಿನ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 8.17 ಗಂಟೆಯ ಸುಮಾರಿಗೆ ಸಣ್ಣ ಪ್ರಮಾಣದ ಭೂಕಂಪನವಾಗಿದೆ ಎಂದು ಆಳಂದ ತಾಲ್ಲೂಕಿನ ತಹಶೀಲ್ದಾರ್ ಅವರು ತಿಳಿಸಿದ್ದಾರೆ.

ರಿಕ್ಟರ್ ಮಾಪಕದಲ್ಲಿ 2.3 ತೀವ್ರತೆ ದಾಖಲಾಗಿದ್ದು, ಸ್ಥಳಕ್ಕೆ ಸಂಬಂಧಪಟ್ಟ ಅಧಿಕಾರಿಗಳು ದೌಡಾಯಿಸಿದ್ದಾರೆ.

ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ತುರ್ತು ಪತ್ರಿಕಾ ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರದೊಂದಿಗೆ ಸಂಪರ್ಕದಲ್ಲಿದ್ದೇನೆ. ಸ್ಥಳಕ್ಕೆ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು, ತಹಶೀಲ್ದಾರ್‌, ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಭೂಕಂಪನವು ಸಣ್ಣ ಪ್ರಮಾಣದ್ದಾಗಿದ್ದು, ಚಿಂಚನಸೂರು ಸೇರಿದಂತೆ ಸುತ್ತಮುತ್ತಲಿನ ವ್ಯಾಪ್ತಿಯ ಗ್ರಾಮಸ್ಥರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು‌ ಮನವಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಆಳಂದ ತಹಶೀಲ್ದಾರ್, 'ಚಿಂಚನಸೂರು ಗ್ರಾಮದಲ್ಲಿ ಬೆಳಗ್ಗೆ ಭೀಕರ ಶಬ್ದ ಕೇಳಿ ಬಂದಿದ್ದು, ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರಿಗೆ ಧೈರ್ಯ ಹೇಳಲಾಗಿದೆ. ಗ್ರಾಮಸ್ಥರು ಯಾವುದೇ ಆತಂಕ ಪಡಬೇಕಿಲ್ಲ' ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News