Kalaburagi | ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಸಚಿವ ಡಾ.ಅಜಯ್ ಸಿಂಗ್ ಭೇಟಿ
ಕಲಬುರಗಿ: ನಗರದ ಟ್ಯಾಂಕ್ ಬಂಡ್ ರಸ್ತೆಯಲ್ಲಿರುವ ಶ್ರೀ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ಶ್ರೀ ಯಲ್ಲಮ್ಮ ದೇವಸ್ಥಾನ ಟ್ರಸ್ಟ್ ಹಾಗೂ ಭಾವಸಾರ ಕ್ಷತ್ರಿಯ ಸಮಾಜದ ಪಾಮಿಡಿ ಫಂಡ್ ವತಿಯಿಂದ ಆಯೋಜಿಸಿದ್ದ ನವರಾತ್ರಿ ಮಹೋತ್ಸವದ ಅಂಗವಾಗಿ ನಡೆದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಅಜಯ್ ಸಿಂಗ್ ಭಾಗವಹಿಸಿದರು.
ಈ ಸಂದರ್ಭದಲ್ಲಿ ಅವರು ಶ್ರೀ ಯಲ್ಲಮ್ಮ ದೇವಿ ಹಾಗೂ ಅಂಬಾ ಭವಾನಿ ದೇವಿಯ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು. ಬಳಿಕ ದೇವಸ್ಥಾನ ಟ್ರಸ್ಟ್ ವತಿಯಿಂದ ಸಚಿವರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಟ್ರಸ್ಟ್ ಅಧ್ಯಕ್ಷ ಡಾ. ರಾಜು ಬಿ. ಜವಳಕರ್, ಕಾರ್ಯದರ್ಶಿ ಹಾಗೂ ಖಜಾಂಚಿ ಅನಿಲ್ ಎಂ. ಜವಳಕರ್ ಸೇರಿದಂತೆ ಟ್ರಸ್ಟ್ ಸದಸ್ಯರು, ರಾಜಕೀಯ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.