×
Ad

ಕಲಬುರಗಿ | ಮಹಿಳಾ ವಿಶ್ರಾಂತಿ ಕೊಠಡಿ‌, ಗ್ರಂಥಾಲಯ ಉದ್ಘಾಟಿಸಿದ ಸಚಿವ ಪ್ರಿಯಾಂಕ್ ಖರ್ಗೆ

Update: 2025-10-31 22:41 IST

ಕಲಬುರಗಿ : ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಮಿಸಲಾಗಿರುವ ಮಹಿಳಾ‌ ನೌಕರರ ವಿಶ್ರಾಂತಿ ಕೋಣೆ‌ ಹಾಗೂ ಸಾರ್ವಜನಿಕ ಗ್ರಂಥಾಲಯವನ್ನು ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರ ಉದ್ಘಾಟಿಸಿದರು.

ಮಹಿಳಾ ನೌಕಕರಿಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿಶ್ರಾಂತಿ ಕೋಣೆ ನಿರ್ಮಾಣ ಮಾಡಿದ್ದು ಇದೇ ಮೊದಲು ಎಂದು ಹೇಳಿದ ಸಚಿವರು, ಜಿಲ್ಲಾಡಳಿತ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದರು.

ತಾಯಂದಿರು ಮಗುವಿಗೆ ಹಾಲುಣಿಸಲು ಪ್ರತ್ಯೇಕ ವಿಭಾಗ ಕೂಡ ಈ ಕೋಣೆಯಲ್ಲಿದೆ. ಆ ನಂತರ ಗ್ರಂಥಾಲಯ ಉದ್ಘಾಟಿಸಿದ ಸಚಿವರು ಪ್ರತಿಯೊಬ್ಬರು ಓದಿನ ಮಹತ್ವ ಅರಿಯಬೇಕು ಎಂದರು.

ಈ‌ ಸಂದರ್ಭದಲ್ಲಿ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಕನೀಜ್ ಫಾತೀಮಾ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಎಸ್ಪಿ ಅಡ್ಡೂರು ಶ್ರೀನಿವಾಸಲು, ಸಿಇಓ ಭಂವರ್ ಸಿಂಗ್ ಮೀನಾ ಸೇರಿದಂತೆ ಹಲವರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News