×
Ad

ಕಲಬುರಗಿ| 10.30 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಶಂಕುಸ್ಥಾಪನೆ

Update: 2026-01-26 19:59 IST

ಕಲಬುರಗಿ:  ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಡಿ.ಎ.ಆರ್. ಪೊಲೀಸ್ ಪರೇಡ್ ಮೈದಾನದಲ್ಲಿ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯಕ್ಕೆ ಸೇರಿದ 10.30 ಕೋಟಿ ರೂ. ಮೊತ್ತದ ವಸತಿ ಗೃಹಗಳು, ಸಂಚಾರಿ ಪೊಲೀಸ್ ಠಾಣೆ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು.

ಕಲಬುರಗಿ ನಗರ ಪೊಲೀಸ್‌ ಆಯುಕ್ತಾಲಯ ಘಟಕಕ್ಕೆ ಪೊಲೀಸ್ ವಸತಿ ಗೃಹ 2025ರ ಹಂತ-5 ಯೋಜನೆಯಡಿಯಲ್ಲಿ ಡಿ.ಎ.ಆರ್ ಆವರಣದಲ್ಲಿ 718.30 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 24 ಪೊಲೀಸ್‌ ವಸತಿ ಗೃಹ ಕಟ್ಟಡ, ಶಾಂತಿ ನಗರದಲ್ಲಿ 236.15 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸುತ್ತಿರುವ 6 ಪಿ.ಎಸ್.ಐ ವಸತಿ ಗೃಹ ಕಟ್ಟಡ ಹಾಗೂ ನಗರದ ಸೂಪರ್ ಮಾರ್ಕೆಟ್ ಪ್ರದೇಶದಲ್ಲಿ 82.25 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸುತ್ತಿರುವ ಸಂಚಾರಿ ಪೊಲೀಸ್‌ ಠಾಣೆ-2ರ ಕಟ್ಟಡ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಲಾಯಿತು.

ಕಾರ್ಯಕ್ರಮದಲ್ಲಿ ಕರ್ನಾಟಕ ರೇಷ್ಮೆ ಉದ್ದಿಮೆಗಳ ನಿಗಮದ ನಿಯಮಿತದ ಅಧ್ಯಕ್ಷೆ ಹಾಗೂ ಉತ್ತರ ಶಾಸಕಿ ಕನೀಜ್ ಫಾತೀಮಾ, ಅಲ್ಲಮಪ್ರಭು ಪಾಟೀಲ್‌, ವಿಧಾನ ಪರಿಷತ್ ಶಾಸಕರುಗಳಾದ ತಿಪ್ಪಣ್ಣಪ್ಪ ಕಮಕನೂರ್‌, ಜಗದೇವ ಗುತ್ತೇದಾರ್, ಜಿಲ್ಲಾಧಿಕಾರಿ ಬಿ. ಫೌಝಿಯಾ ತರನ್ನುಮ್, ಕಲಬುರಗಿ ನಗರ ಪೊಲೀಸ್ ಆಯುಕ್ತ ಡಾ. ಶರಣಪ್ಪ ಎಸ್.ಡಿ., ಎಸ್.ಪಿ. ಅಡ್ಡೂರು ಶ್ರೀನಿವಾಸಲು, ಜಿಲ್ಲಾ ಪಂಚಾಯತ್ ಸಿ.ಇ.ಓ ಭಂವರ್ ಸಿಂಗ್ ಮೀನಾ  ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News