ಕಲಬುರಗಿ | ಬಾಲಕಿಯರ ಬಾಲ ಮಂದಿರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ, ಪರಿಶೀಲನೆ
Update: 2025-06-06 15:55 IST
ಕಲಬುರಗಿ: ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ ಪ್ರಿಯಾಂಕ್ ಖರ್ಗೆ ಅವರು ನಗರದ ಆಳಂದ್ ಚೆಕ್ ಪೋಸ್ಟ್ ಬಳಿ ಇರುವ ಸರ್ಕಾರಿ ಬಾಲಕಿಯರ ಬಾಲ ಮಂದಿರಕ್ಕೆ ಭೇಟಿ ನೀಡಿದರು.
ಈ ವೇಳೆ ಅವರು ಅಲ್ಲಿನ ಮಕ್ಕಳೊಂದಿಗೆ ಸಂವಾದ ನಡೆಸಿ, ಕೇಂದ್ರಕ್ಕೆ ಬೇಕಾಗುವ ಎಲ್ಲ ಸೌಲಭ್ಯ ಒದಗಿಸುವುದ ಜೊತೆಗೆ ಅವರ ಉಜ್ವಲ ಭವಿಷ್ಯಕ್ಕೆ ಅಗತ್ಯವಿರುವ ಎಲ್ಲ ಕ್ರಮವಹಿಸುವುದಾಗಿ ಹೇಳಿದರು.
ಬಾಲಕಿಯರಿಗೆ ಶೈಕ್ಷಣಿಕ ಪ್ರವಾಸಕ್ಕೆ ಕಳಿಸುವುದಕ್ಕೆ ಸಂಬಂಧಿಸಿದಂತೆ ಸಮಾಜ ಕಲ್ಯಾಣ ಇಲಾಖೆ ಸಚಿವರೊಂದಿಗೆ ಚರ್ಚಿಸುವುದಾಗಿ ಅವರು ಹೇಳಿದರು.
ಈ ಸಂದರ್ಭದಲ್ಲಿ ಶಾಸಕಿ ಕನೀಝ್ ಫಾತೀಮಾ, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪೊಲೀಸ್ ಕಮಿಷನರ್ ಡಾ.ಶರಣಪ್ಪ ಎಸ್.ಡಿ., ಸಿಇಓ ಭಂವಾರ ಸಿಂಗ್, ಮಜಹರ್ ಖಾನ್ ಆಲಂ ಸೇರಿದಂತೆ ಮತ್ತಿತರರು ಇದ್ದರು.