Kalaburagi | ಸಚಿವ ಪ್ರಿಯಾಂಕ್ ಖರ್ಗೆ ಜನ್ಮದಿನ: ಬಡ ಮಹಿಳೆಯರಿಗೆ ಸೀರೆ ವಿತರಣೆ
ಕಲಬುರಗಿ: ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನದ ಅಂಗವಾಗಿ ನಗರದ ರಾಜಾಪುರ ಬಡಾವಣೆಯ ಮಲ್ಲಿಕಾರ್ಜುನ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಅಶೋಕ್ ಸಿ.ಹೊನ್ನಳ್ಳಿ ಅವರ ನೇತೃತ್ವದಲ್ಲಿ ಬಡ ಮಹಿಳೆಯರಿಗೆ ಒಂದು ಸಾವಿರ ಸೀರೆಗಳನ್ನು ವಿತರಿಸಲಾಯಿತು.
ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ವಿಧಾನ ಪರಿಷತ್ ಸದಸ್ಯ ತಿಪ್ಪಣ್ಣಪ್ಪ ಕಮಕನೂರ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ. ಕಿರಣ್ ದೇಶಮುಖ, ಜೆಸ್ಕಾಂ ಅಧ್ಯಕ್ಷ ಪ್ರವೀಣ ಪಾಟೀಲ್ ಹರವಾಳ ಹಾಗೂ ಕಾಂಗ್ರೆಸ್ ಮುಖಂಡ ಶಿವಾನಂದ ಪಾಟೀಲ್ ಮರತೂರ ಮಾತನಾಡಿ, ಸಚಿವ ಪ್ರಿಯಾಂಕ್ ಖರ್ಗೆ ಅವರ ಜನ್ಮದಿನವನ್ನು ಬಡ ಮಹಿಳೆಯರಿಗೆ ಸೀರೆ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿರುವ ಅಶೋಕ್ ಸಿ. ಹೊನ್ನಳ್ಳಿ ಅವರ ಕಾರ್ಯವನ್ನು ಶ್ಲಾಘಿಸಿದರು.
ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆ ಅಧಿಕಾರಿ ಗೌತಮ್ ಕಾಂಬಳೆ, ಮಾಜಿ ಮೇಯರ್ ರವೀಂದ್ರ ಹೊನ್ನಳ್ಳಿ, ಮಾಜಿ ಪಾಲಿಕೆ ಸದಸ್ಯ ರಾಹುಲ್ ಹೊನ್ನಳ್ಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಸಂಘಪಾಲ್ ಕಾಂಬಳೆ, ಸುರೇಶ್ ನೀಲೂರ್, ಅರ್ಜುನ ಚೌದ್ರಿ ಸೇರಿದಂತೆ ಬಡಾವಣೆಯ ಮಹಿಳೆಯರು ಹಾಗೂ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.