×
Ad

ಕಲಬುರಗಿ| ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಸಚಿವ ಪ್ರಿಯಾಂಕ್‌ ಖರ್ಗೆ

Update: 2025-12-06 19:24 IST

ಕಲಬುರಗಿ: ಮಹಾನಗರ ಪಾಲಿಕೆ ಹಾಗೂ ಜಿಲ್ಲಾ ನಗರ ಅಭಿವೃದ್ಧಿ ಕೋಶದ ಅಡಿಯಲ್ಲಿ ನಗರದ ಕಿಣ್ಣಿ ಮಾರುಕಟ್ಟೆ ಬಳಿ ನೂತನವಾಗಿ ನಿರ್ಮಿಸಿದ ಇಂದಿರಾ ಕ್ಯಾಂಟೀನ್ ಅನ್ನು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್‌ ಖರ್ಗೆ ಉದ್ಘಾಟಿಸಿದರು.

ಬಡ ಹಾಗೂ ಮಧ್ಯಮ ವರ್ಗದ ಜನರು, ಕೃಷಿ ಕೂಲಿ- ಕಾರ್ಮಿಕರು ಸೇರಿದಂತೆ ಎಲ್ಲರೂ ಅತಿ ಕಡಿಮೆ ಹಣವನ್ನು ಪಾವತಿಸಿ ಊಟ ಮಾಡಲು ಅನುಕೂಲವಾಗಂತೆ ರಾಜ್ಯ ಸರಕಾರ ಇಂದಿರಾ ಕ್ಯಾಂಟಿನ್ ಸ್ಥಾಪಿಸಿದೆ. ಕಲಬುರಗಿ ನಗರದ ಜನದಟ್ಟಣೆಯ ಪ್ರದೇಶದ ಕಿಣ್ಣಿ ಮಾರುಕಟ್ಟೆ ಬಳಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಇದರಿಂದ ಸಾರ್ವಜನಿಕರಿಗೆ ಅನುಕೂಲವಾಗಲಿದೆ ಎಂದು ಪ್ರಿಯಾಂಕ್‌ ಖರ್ಗೆ ಹೇಳಿದರು.  

ಶುಚಿತ್ವ ಕಾಪಾಡುವಂತೆ ಸಿಬ್ಬಂದಿಗಳಿಗೆ ಸೂಚಿಸಿದ ಸಚಿವರು, ರುಚಿಕರವಾದ ಆಹಾರ ತಯಾರು ಮಾಡಿ ಸಾರ್ವಜನಿಕರಿಗೆ ಒದಗಿಸಬೇಕು. ನಮ್ಮ ಯೋಜನೆಯ ಲಾಭ ಎಲ್ಲರೂ ಪಡೆಯುವಂತಾಗಬೇಕು. ಇದಕ್ಕೆ ಸಂಬಂಧಿಸಿದ ಅಧಿಕಾರಿಗಳು ನಿರಂತರ ಕ್ರಮವಹಿಸಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಎಂಎಲ್‌ಸಿ ಜಯದೇವ್‌ ಗುತ್ತೇದಾರ್, ಜಿಲ್ಲಾಧಿಕಾರಿ ಫೌಝಿಯಾ ತರನ್ನುಮ್, ಪಾಲಿಕೆ ಆಯುಕ್ತ ಅವಿನಾಶ್ ಶಿಂಧೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News