×
Ad

ಕಲಬುರಗಿ | ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ, ಕೊಲೆ ಪ್ರಕರಣ: ಬಾಲಕನಿಗೆ 10 ವರ್ಷ ಶಿಕ್ಷೆ

Update: 2025-10-10 20:49 IST

ಕಲಬುರಗಿ: ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಆರೋಪ ಸಾಬೀತಾದ್ದರಿಂದ ಬಾಲಕನಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

2022ರ ನ.1 ರಂದು ಅಫಜಲಪುರ ತಾಲೂಕಿನ ಗ್ರಾಮವೊಂದರ ಕಬ್ಬಿನ ತೋಟದಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಬಾಲಕನು ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ್ದನು. ಈ ಕುರಿತು ಆಗಿನ ತನಿಖಾಧಿಕಾರಿಗಳಾಗಿದ್ದ ಸಿಪಿಐ ಬಾಸು ಚವ್ಹಾಣ್ ಮತ್ತು ಪಿಎಸ್‌ಐ ತಿರುಮಲೇಶ ಅವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು.

ಪ್ರಕರಣದ ಸಾಕ್ಷಾಧಾರಗಳನ್ನು ಪರಿಶೀಲಿಸಿ ಎರಡೂ ಪಕ್ಷದವರ ವಾದ-ವಿವಾದಗಳನ್ನು ಆಲಿಸಿದ ನಂತರ ನ್ಯಾಯಾಧೀಶರಾದ ಜಿ.ಎಲ್.ಲಕ್ಷ್ಮೀನಾರಾಯಣ ಅವರು ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿ ಆದೇಶಿಸಿದ್ದಾರೆ.

ಸರ್ಕಾರದ ಪರವಾಗಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಸರ್ಕಾರಿ ಅಭಿಯೋಜಕ ಎಸ್.ಆರ್ ನರಸಿಂಹಲು ಅವರು ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News