×
Ad

ಕಲಬುರಗಿ | ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟಕ್ಕೆ ಶಾಸಕ ಅಲ್ಲಮಪ್ರಭು ಪಾಟೀಲ್ ಚಾಲನೆ

Update: 2025-08-25 22:27 IST

ಕಲಬುರಗಿ: 2025- 26ನೇ ಸಾಲಿನ ಕಲಬುರಗಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟವನ್ನು ಸೋಮವಾರ ದಕ್ಷಿಣ ಮತಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಶಾಸಕ ಪಾಟೀಲ್ ಅವರು, ಕ್ರೀಡೆಯು ಮನುಷ್ಯನ ಜೀವನದಲ್ಲಿ ಅತೀ ಮುಖ್ಯವಾದ ಪಾತ್ರವನ್ನು ವಹಿಸುತ್ತದೆ. ಸದೃಢ ದೇಹ ಮತ್ತು ಸದೃಢ ಮನಸ್ಸಿಗೆ ಎಲ್ಲರಿಗೂ ಕ್ರೀಡೆ ಬಹಳ ಮುಖ್ಯವಾಗಿದೆ ಎಂದು ಅಭಿಪ್ರಾಯಪಟ್ಟರು.

ಕ್ರೀಡಾಕೂಟದಲ್ಲಿ ಭಾಗವಹಿಸಿ ತಾಲ್ಲೂಕಿನಿಂದ ಜಿಲ್ಲಾಮಟ್ಟ, ವಿಭಾಗ ಮಟ್ಟಕ್ಕೆ ಮತ್ತು ರಾಜ್ಯಮಟ್ಟದಲ್ಲಿ ಭಾಗವಹಿಸಿ ನಮ್ಮ ಜಿಲ್ಲೆಯ ಕೀರ್ತಿಯನ್ನು ತರಬೇಕೆಂದು ಹೇಳಿದರು.

ಸಹಾಯಕ ನಿರ್ದೇಶಕ ಸೋಮಶೇಖರ್ ವೈ.ಅವರ ಮಾತನಾಡಿದರು.

ಹಾಕಿ ತಬೆತುದಾರ ಸಂಜಯ್ ಬಾಣದ, ಬಾಸ್ಕೆಟ್ ಬಾಲ್ ತರಬೇತುದಾರ ಪ್ರವೀಣ್ ಪುಣೆ, ಶಿಕ್ಷಣ ಇಲಾಖೆ ಎಲ್ಲಾ ದೈಹಿಕ ಶಿಕ್ಷಕರು, ನಿರ್ಣಾಯಕರು ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

ಕಾರ್ಯಕ್ರಮದ ನಿರೂಪಣೆಯನ್ನು ಮುಜಮಿಲ್ ಕೆಂಭಾವಿ ಮಾಡಿದರು. ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರು, ಆರೋಗ್ಯ ಇಲಾಖೆಯ ಸಿಬ್ಬಂದಿ, ಅನೇಕ ಕ್ರೀಡಾಪಟುಗಳು ಇದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News