ಕಲಬುರಗಿ: ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಡಾ. ರೆಹಮಾನ್ ಪಟೇಲ್ ಅವರನ್ನು ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ್ ಅವರು ತಮ್ಮ ಕಚೇರಿಯಲ್ಲಿ ಆತ್ಮೀಯವಾಗಿ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಅಲ್ಲಮಪ್ರಭು ಪಾಟೀಲ್, “ಡಾ. ರೆಹಮಾನ್ ಪಟೇಲ್ ಅವರಂತಹ ಕಲಾವಿದರು ನಮ್ಮ ನಾಡಿನ ಆಸ್ತಿ. ಅವರಿಗೆ ರಾಷ್ಟ್ರಪತಿ ಪ್ರಶಸ್ತಿ ಲಭಿಸಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯ. ಅವರ ಕಲಾಸೇವೆ ಮತ್ತಷ್ಟು ಎತ್ತರಕ್ಕೆ ಬೆಳೆಯಲಿ” ಎಂದು ಹಾರೈಸಿದರು.

ಇದೇ ವೇಳೆ ನಯಾ ಸವೇರಾ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಹಾಗೂ ಸಾಮಾಜಿಕ ಕಾರ್ಯಕರ್ತ ಮೋದಿನ್ ಪಟೇಲ್ ಅಣಬಿ ಅವರು ಡಾ. ರೆಹಮಾನ್ ಪಟೇಲ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಶಾಂತು ಪಾಟೀಲ್, ವೆಂಕಟೇಶ್ ಜಾಧವ್ ಸೇರಿದಂತೆ ಕಲಾಭಿಮಾನಿಗಳು, ಸಾಹಿತಿಗಳು ಹಾಗೂ ಇತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor