×
Ad

Kalaburagi | 1 ಕೋಟಿ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಶಾಸಕ ಅಲ್ಲಮಪ್ರಭು ಪಾಟೀಲ್‌ ಚಾಲನೆ

Update: 2026-07-15 19:05 IST

ಕಲಬುರಗಿ : ನಗರದ ಮೂಲಸೌಕರ್ಯ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಮಹಾತ್ಮ ಗಾಂಧಿ ನಗರ ವಿಕಾಸ್ ಯೋಜನೆ (ಎಂಜಿಎನ್‌ವೈ) ಅಡಿಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗಿರುವ ಸರ್ಕಾರಿ ಆಸ್ಪತ್ರೆ ವೃತ್ತದಿಂದ ಎಸ್‌ಟಿಬಿಟಿ ಕ್ರಾಸ್‌ವರೆಗೆ ರಸ್ತೆ ನಿರ್ಮಾಣ ಕಾಮಗಾರಿಗೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಅಲ್ಲಮಪ್ರಭು ಪಾಟೀಲ ಬುಧವಾರ ಗುದ್ದಲಿ ಪೂಜೆ ನೆರವೇರಿಸಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಗರದ ವಿವಿಧ ಭಾಗಗಳಲ್ಲಿ ಗುಣಮಟ್ಟದ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವುದು ಸರ್ಕಾರದ ಆದ್ಯತೆಯಾಗಿದ್ದು, ರಸ್ತೆ ಕಾಮಗಾರಿಯನ್ನು ನಿಗದಿತ ಅವಧಿಯೊಳಗೆ ಗುಣಮಟ್ಟದಿಂದ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಈ ರಸ್ತೆ ನಿರ್ಮಾಣದಿಂದ ಸ್ಥಳೀಯ ನಿವಾಸಿಗಳು, ರೋಗಿಗಳು, ಆಸ್ಪತ್ರೆ ಸಿಬ್ಬಂದಿ ಹಾಗೂ ವಾಹನ ಸವಾರರಿಗೆ ಅನುಕೂಲವಾಗಲಿದ್ದು, ಈ ಭಾಗದಲ್ಲಿನ ಸಂಚಾರ ದಟ್ಟಣೆಯೂ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಲಬುರಗಿ ಮಹಾನಗರ ಪಾಲಿಕೆ ಮೇಯರ್ ವರ್ಷಾ ಆರ್. ಜಾನೆ, ಉಪಮೇಯರ್ ತೃಪ್ತಿ ಲಾಖೆ, ಪಾಲಿಕೆ ಸದಸ್ಯರು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News