ಕಲಬುರಗಿ: ಶಾಸಕ ಎಂ.ವೈ ಪಾಟೀಲ್ ಸಂಚರಿಸುತ್ತಿದ್ದ ಕಾರು ಅಪಘಾತ
Update: 2024-01-05 19:46 IST
ಕಲಬುರಗಿ: ಅಫಜಲಪರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ.ವೈ ಪಾಟೀಲ್ ಸಂಚರಿಸುತ್ತಿದ್ದ ಕಾರು ಅಪಘಾತಕ್ಕೀಡಾದ ಘಟನೆ ಅಫಜಲಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶುಕ್ರವಾರ ಮಧ್ಯಾಹ್ನ ಅಫಜಲಪುರ ತಾಲೂಕಿನ ಜೇವರ್ಗಿ ಗ್ರಾಮದ ಹೊರವಲಯದಲ್ಲಿ ಅಪಘಾತ ಸಂಭವಿಸಿದ್ದು, ಶಾಸಕ ಎಂ.ವೈ ಪಾಟೀಲ್ ಗೆ ಮುಖಕ್ಕೆ ಹಾಗೂ ಕಾಲಿಗೆ ಗಾಯವಾಗಿದ್ದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗ್ರಾಮದ ಹೊರವಲಯದ ರಸ್ತೆಯಲ್ಲಿ ಟರ್ನ್ ಮಾಡುವಾಗ ಕಾರು ಕಂದಕ್ಕೆ ಉರುಳಿದ್ದು, ಕಾರಿನ ಗಾಜು ಪುಡಿಯಾಗಿದೆ ಎನ್ನಲಾಗಿದೆ.