ಕಲಬುರಗಿ: ಅಫಜಲಪುರ ತಾಲೂಕಿನ ಅರ್ಜುಣಗಿ (ಪಜಾ-304) ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾಥಮಿಕ ವಿಭಾಗದ ಬಾಲಕಿಯರ ವಾಲಿಬಾಲ್ ತಂಡವು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ.

ಮಂಗಳವಾರ (ಸೆಪ್ಟೆಂಬರ್ 22) ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಂಡದ ಸಾಧನೆಗೆ ಸಮಾಜ ಕಲ್ಯಾಣ ಇಲಾಖೆಯ ಕಲಬುರಗಿ ಜಂಟಿ ನಿರ್ದೇಶಕಿ ಪ್ರೀತಿ ದೊಡ್ಡಮನಿ ಅಭಿನಂದನೆ ಸಲ್ಲಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.

ಶಾಲೆಯ ಪ್ರಾಂಶುಪಾಲ ಶರಣಬಸಪ್ಪ ಪಾಟೀಲ್, ತಂಡದ ತರಬೇತಿದಾರ ರಾಜಶೇಖರ ಕುಂಬಾರ, ತಂಡದ ಮ್ಯಾನೇಜರ್ ಹಾಗೂ ಗಣಕಯಂತ್ರ ಶಿಕ್ಷಕ ಶಿವರಾಜ, ಚಿತ್ರಕಲಾ ಶಿಕ್ಷಕ ವಿನೋದಕುಮಾರ ಜೇವೂರ, ಕನ್ನಡ ಭಾಷೆ ಶಿಕ್ಷಕಿ ಜೈನಾಬಿ ಸೇರಿದಂತೆ ವಸತಿ ಶಾಲೆಯ ಸಿಬ್ಬಂದಿ ತಂಡದ ಸಾಧನೆಯನ್ನು ಅಭಿನಂದಿಸಿದ್ದಾರೆ.

ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದಿರುವ ಬಾಲಕಿಯರ ತಂಡ ಇದೀಗ ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಜಿಲ್ಲೆಯ ಪ್ರತಿನಿಧಿಯಾಗಿ ಭಾಗವಹಿಸಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor