ಕಲಬುರಗಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಮುಂದೂಡಿಕೆ : ಆ.29ಕ್ಕೆ ಮರು ನಿಗದಿ

Update: 2026-08-06 21:39 IST

ಕಲಬುರಗಿ : ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಮುಂದೂಡಲಾಗಿದ್ದು, ಇದೀಗ ಆಗಸ್ಟ್‌ 29ರಂದು ನಡೆಸಲು ಮರು ನಿಗದಿಪಡಿಸಲಾಗಿದೆ.

ಈ ಕುರಿತು ಪ್ರಾದೇಶಿಕ ಆಯುಕ್ತೆ ಜಹೀರಾ ನಶೀಮ್ ಅಧಿಸೂಚನೆ ಹೊರಡಿಸಿದ್ದು, ಮಹಾನಗರ ಪಾಲಿಕೆ ಆಯುಕ್ತರ ಪ್ರಸ್ತಾವನೆಯ ಮೇರೆಗೆ ಆಗಸ್ಟ್‌ 7ರಂದು ಚುನಾವಣೆ ನಡೆಸಲು ದಿನಾಂಕ ನಿಗದಿಪಡಿಸಲಾಗಿತ್ತು. ಈ ಸಂಬಂಧ ಜುಲೈ 20ರಂದು ಪಾಲಿಕೆಯ ಎಲ್ಲ ಸದಸ್ಯರಿಗೆ ಚುನಾವಣಾ ಸಭೆಯ ನೋಟಿಸ್ ಜಾರಿಗೊಳಿಸಲಾಗಿತ್ತು ಎಂದು ತಿಳಿಸಿದ್ದಾರೆ.

ಆದರೆ, ಉಚ್ಚ ನ್ಯಾಯಾಲಯದ ರಿಟ್ ಅರ್ಜಿ ಸಂಖ್ಯೆ 200778/2026ರಲ್ಲಿ ಈ ಪ್ರಾಧಿಕಾರದ ಮಧ್ಯಂತರ ಅರ್ಜಿಯನ್ನು ಅಂಗೀಕರಿಸಿ ಚುನಾವಣೆಯನ್ನು ಮುಂದೂಡಲು ಆದೇಶಿಸಿರುವ ಹಿನ್ನೆಲೆಯಲ್ಲಿ, ಆಗಸ್ಟ್‌ 7ರಂದು ನಡೆಯಬೇಕಿದ್ದ ಚುನಾವಣೆಯನ್ನು ಮುಂದೂಡಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಮುಂದೂಡಲ್ಪಟ್ಟ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರ ಚುನಾವಣೆಯನ್ನು ಆಗಸ್ಟ್‌ 29ರಂದು ನಡೆಸಲಾಗುವುದು ಎಂದು ಪ್ರಾದೇಶಿಕ ಆಯುಕ್ತೆ ಜಹೀರಾ ನಶೀಮ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News