Kalaburagi | ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ
ಜುಬೇರ್
ಕಲಬುರಗಿ : ನಗರದ ಫಿಲ್ಟರ್ ಬೆಡ್ ಪ್ರದೇಶದ ಬಳಿ ವ್ಯಕ್ತಿಯೊಬ್ಬನನ್ನು ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ರವಿವಾರ ವರದಿಯಾಗಿದೆ.
ನಗರದ 30 ವರ್ಷದ ಜುಬೇರ್ ಕೊತ್ವಾಲ್ ಕೊಲೆಯಾದ ವ್ಯಕ್ತಿ. ಶನಿವಾರ ರಾತ್ರಿ ನಾಲ್ವರು ಯುವಕರು ಜುಬೇರ್‌ನನ್ನು ಕರೆದುಕೊಂಡು ಹೋಗಿ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ ಎನ್ನಲಾಗಿದೆ.
ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಬ್ ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆ ಹಾಗೂ ಬಂಧನಕ್ಕಾಗಿ ಪೊಲೀಸರು ಬಲೆ ಬೀಸಿದ್ದಾರೆ.