×
Ad

ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಹತ್ಯೆ ಪ್ರಕರಣ: 7 ಮಂದಿ ಆರೋಪಿಗಳ ಬಂಧನ

Update: 2025-06-25 18:31 IST

ಕಲಬುರಗಿ : ನಗರದ ಹೊರವಲಯದ ಪಟ್ಟಣ ಗ್ರಾಮದ ಸಮೀಪದ ಡ್ರೈವರ್ ಧಾಬಾ ಬಳಿ ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಹತ್ಯೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತ ಡಾ.ಶರಣಪ್ಪ ಎಸ್.ಡಿ ತಿಳಿಸಿದ್ದಾರೆ.

ಹತ್ಯೆಗೆ ಸಂಬಂಧಿಸಿದಂತೆ 11 ಮಂದಿ ವಿರುದ್ಧ ದೂರು ದಾಖಲಾಗಿದ್ದು, 7 ಮಂದಿಯನ್ನು ವಶಕ್ಕೆ ಪಡೆದು, ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್‌ ಕಮಿಷನರ್ ತಿಳಿಸಿದ್ದಾರೆ.

ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಧಾಬಾಗೆ ನುಗ್ಗಿದ ದುಷ್ಕರ್ಮಿಗಳು ಮಾರಾಕಾಸ್ತ್ರಗಳಿಂದ ಕೊಚ್ಚಿ ಮೂವರನ್ನು ಹತ್ಯೆ ಮಾಡಿದ್ದರು. ಹಳೆಯ ದ್ವೇಷದ ಕಾರಣ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.

ಈ ಕುರಿತು ಕಲಬುರಗಿ ಸಬ್ಅರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News