×
Ad

ಕಲಬುರಗಿ | ಮಾ.20, 21ರಂದು ಕೇಂದ್ರೀಯ ವಿವಿಯಲ್ಲಿ ಹೈದರಾಬಾದ್ ಸಂಸ್ಥಾನದ ಸಾಂಸ್ಕೃತಿಕ ಪರಂಪರೆ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Update: 2025-03-18 19:25 IST

ಕಲಬುರಗಿ : ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕಡಗಂಚಿ ಕಲಬುರಗಿ ಹಾಗೂ ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆ ಕಲಬುರಗಿ ಇವುಗಳ ಸಂಯುಕ್ತಾಶ್ರಯದಲ್ಲಿ “ಹೈದರಾಬಾದ ಸಂಸ್ಥಾನದ ಸಾಂಸ್ಕೃತಿಕ ಪರಂಪರೆ” ಕುರಿತು ಮಾ.20 ಹಾಗೂ 21 ರಂದು ಎರಡು ದಿನಗಳ ಕಾಲ ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಹಮ್ಮಿಕೊಳ್ಳಲಾಗಿದೆ.

ಮಾರ್ಚ್ 20 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ನಿವೃತ್ತ ಸಮಕುಲಪತಿಗಳಾದ ಪ್ರೊ.ಎಸ್. ಚಂದ್ರಶೇಖರ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಉದ್ಘಾಟಿಸಿ, ಪ್ರದಾನ ಭಾಷಣ ಮಾಡುವರು.

ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಟ್ಟು ಸತ್ಯನಾರಾಯಣ, ಕರ್ನಾಟಕ ರಾಜ್ಯ ಪತ್ರಾಗಾರ ಇಲಾಖೆಯ ನಿರ್ದೇಶಕ ಗವಿಸಿದ್ದಯ್ಯ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಆರ್.ಬಿರಾದಾರ, ಮೈಸೂರು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಅಪ್ಪಾರಾವ ಅಕ್ಕೋಣಿ, ಕಲಬುರಗಿ ವಿಭಾಗೀಯ ಪತ್ರಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಡಾ.ವೀರಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಮಾನವಿಕ ಮತ್ತು ಭಾಷಾ ನಿಕಾಯ ಡೀನರಾದ ಪ್ರೊ.ವಿಕ್ರಮ್ ವಿಸಾಜಿ ಪ್ರಾಸ್ತಾವಿಕ ನುಡಿ ಹೇಳುವರು. ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಶಿವಗಂಗಾ ರುಮ್ಮಾ ಅವರು ಅಧ್ಯಕ್ಷತೆ ವಹಿಸುವರು.

ಮಾರ್ಚ್ 20 ರಂದು ಮಧ್ಯಾಹ್ನ 12.30 ಗಂಟೆಗೆ ಬೆಂಗಳೂರಿನ ಭಾರತೀಯ ಇತಿಹಾಸ ಅನುಸಂಧಾನ ಪರಿಷತ್ತಿನ ಉಪನಿರ್ದೇಶಕಿ ಡಾ.ಎಸ್.ಕೆ.ಅರುಣಿ ಅವರು “ಹೈದರಾಬಾದ ನಿಜಾಮರ ಆಳ್ವಿಕೆಯಲ್ಲಿ ಇತಿಹಾಸ ಮತ್ತು ಪುರಾತತ್ವ ಅಧ್ಯಯನಗಳು ಮತ್ತು ಕನ್ನಡ ನಾಡಿನ ಚರಿತ್ರೆ ರಚನೆಯ ಬೆಳವಣಿಗೆ” ಕುರಿತು, ಮಧ್ಯಾಹ್ನ 2.30 ಗಂಟೆಗೆ ಬೀದರಿನ ಇತಿಹಾಸ ಸಂಶೋಧಕ ಡಾ.ರಘುಶಂಖ ಭಾತಂಬ್ರಾ ಅವರು “ಹೈದರಾಬಾದ ಸಂಸ್ಥಾನ ಮತ್ತು ಬ್ರಿಟಿಷರ ಸಂಬಂಧಗಳು” ಕುರಿತು ಹಾಗೂ ಮಧ್ಯಾಹ್ನ 3.30 ಗಂಟೆಗೆ ವಿಜಯಪುರದ ಡೆಕ್ಕನ್ ಅಧ್ಯಯನ ಮತ್ತು ಇತಿಹಾಸ ಸಂಶೋಧನೆಯ ಇತಿಹಾಸಕಾರ ಮತ್ತು ಸೂಫಿ ವಿದ್ವಾಂಸರಾದ ಅಬ್ದುಲ್ ಅಜೀಜ್ ರಜಪೂತ್ ಅವರು “ಹೈದರಾಬಾದ ನಿಜಾಮರ ಕಾಲದ ರತ್ನಾಭರಣಗಳು” ಎಂಬ ವಿಷಯಗಳ ಮೇಲೆ ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ.

ಮಾರ್ಚ್ 21 ರಂದು ಬೆಳಿಗ್ಗೆ 10 ಗಂಟೆಗೆ ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಸಹ ಪ್ರಾಧ್ಯಾಪಕ ಡಾ.ಬಸವರಾಜ ಕೋಡಗುಂಟಿ ಅವರು “ಹೈದರಾಬಾದ ಸಂಸ್ಥಾನ: ಭಾಷಿಕ ಪರಿಸರ” ಕುರಿತು, ಬೆಳಿಗ್ಗೆ 11 ಗಂಟೆಗೆ ಕಲಬುರಗಿ ವಿಭಾಗೀಯ ಪತ್ರಾಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಡಾ.ವೀರಶೆಟ್ಟಿ ಅವರು “ಮುಲ್ಕಿ ಚಳುವಳಿ: ಇತಿಹಾಸ ಮತ್ತು ಸ್ವರೂಪ” ಕುರಿತು, ಮಧ್ಯಾಹ್ನ 12 ಗಂಟೆಗೆ ಕಲಬುರಗಿ ಇತಿಹಾಸ ಸಂಶೋಧಕ ಬೋಡೆ ರಿಯಾಜ್ ಅಹ್ಮದ್ ಅವರು “ಹೈದರಾಬಾದ ಸಂಸ್ಥಾನ: ಶೈಕ್ಷಣಿಕ ಕೊಡುಗೆಗಳು” ಕುರಿತು ಹಾಗೂ ಮಧ್ಯಾಹ್ನ 2 ಗಂಟೆಗೆ ಕಲಬುರಗಿ ಗುಲ್ಬರ್ಗಾ ವಿಶ್ವವಿದ್ಯಾಲಯದ ದೃಶ್ಯಕಲಾ ಅಧ್ಯಯನ ವಿಭಾಗದ ಅಧ್ಯಾಪಕ ಡಾ. ಮಲ್ಲಿಕಾರ್ಜುನ ಸಿ. ಬಾಗೋಡಿ ಅವರು “ಹೈದರಾಬಾದ ಸಂಸ್ಥಾನ: ಚಿತ್ರಕಲೆ” ಕುರಿತು ಹಾಗೂ ಮಧ್ಯಾಹ್ನ 3 ಗಂಟೆಗೆ ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪುರಾತತ್ವ ವಿಭಾಗದ ಪ್ರಾಧ್ಯಾಪಕ ಡಾ. ಅಬ್ದುಲ್ ಮಾಜಿದ್ ಅವರು “ಮರೆಯಿಂದ ಬೆಳಕಿಗೆ: ಮಹಿಳಾ ಶಿಕ್ಷಣ” ಕುರಿತು ವಿಷಯಗಳ ಮೇಲೆ ತಮ್ಮ ಸಂಶೋಧನಾ ಪ್ರಬಂಧಗಳನ್ನು ಮಂಡಿಸಲಿದ್ದಾರೆ.

ಸಮಾರೋಪ ಸಮಾರಂಭ :

ಈ ವಿಚಾರ ಸಂಕಿರಣದ ಸಮಾರೋಪ ಸಮಾರಂಭವು ಅಂದು ಸಂಜೆ 4 ಗಂಟೆಗೆ ಜರುಗಲಿದ್ದು, ಕಲ್ಯಾಣ ಕರ್ನಾಟಕ ಇತಿಹಾಸ ರಚನಾ ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಡಾ.ಲಕ್ಷ್ಮಣ ದಸ್ತಿ ಅವರು ಸಮಾರೋಪ ನುಡಿಗಳನ್ನಾಡಲಿದ್ದಾರೆ. ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥೆ ಡಾ.ಶಿವಗಂಗಾ ರುಮ್ಮಾ ಅವರು ಅಧ್ಯಕ್ಷತೆ ವಹಿಸುವರು.

ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಟ್ಟು ಸತ್ಯನಾರಾಯಣ, ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ.ಆರ್.ಆರ್. ಬಿರಾದಾರ, ಕಲಬುರಗಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಲಯದ ಮಾನವಿಕ ಮತ್ತು ಭಾಷಾ ನಿಕಾಯದ ಡೀನರಾದ ಪ್ರೊ. ವಿಕ್ರಮ್ ವಿಸಾಜಿ ಹಾಗೂ ಕಲಬುರಗಿ ವಿಭಾಗೀಯ ಪತ್ರಗಾರ ಕಚೇರಿಯ ಹಿರಿಯ ಸಹಾಯಕ ನಿರ್ದೇಶಕ ಡಾ. ವೀರಶೆಟ್ಟಿ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News